ಪ್ರವಾಹ ಸಂತ್ರಸ್ತರಿಗೆ ಸರ್ಕಾರ ದೊಡ್ಡ ಮೊತ್ತದ ಪರಿಹಾರ ನೀಡುತ್ತಿದೆ: ಸಿಎಂ ಯಡಿಯೂರಪ್ಪ

ಪ್ರವಾಹ ಹಾಗೂ ಅತೀವ್ರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ಹೆಚ್ಚು ಮೊತ್ತದ ಪರಿಹಾರವನ್ನು ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 
ಯಡಿಯೂರಪ್ಪ
ಯಡಿಯೂರಪ್ಪ

ಬೆಳಗಾವಿ: ಪ್ರವಾಹ ಹಾಗೂ ಅತೀವ್ರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ಹೆಚ್ಚು ಮೊತ್ತದ ಪರಿಹಾರವನ್ನು ನೀಡುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದೇಶದಲ್ಲಿಯೇ ಇದೇ ಮೊದಲ ಬಾರಿಗೆ ರೈತರಿಗೆ ದೊಡ್ಡ ಮೊತ್ತದ ಪರಿಹಾರವನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. 

ಪ್ರತೀ ಹೆಕ್ಟರ್ ಭೂಮಿಗೆ ರೂ.16,500 ಪರಿಹಾರವನ್ನು ನೀಡಲಾಗುತ್ತಿದೆ. ನೀರಾವರಿ ಜಮೀನುಗಳಿಗೆ ಪ್ರತೀ ಹೆಕ್ಟೇರಿಗೆ ರೂ.23,000 ಹಾಗೂ ತೋಟಗಾರಿಕೆ ಜಮೀನಿನ ಹೆಕ್ಟೇರಿಗೆ ರೂ.25,000 ಪರಿಹಾರ ನೀಡಲಾಗುತ್ತಿದೆ. ಘಟಕಗಳು ಹಾನಿಯಾದ ಕೈಗ್ಗ ಮಾಲೀಕರಿಗೆ ರೂ. 50 ಸಾವಿರ ಪರಿಹಾರ ನೀಡಲಾಗುತ್ತಿದೆ. ಮನೆ ಕಳೆದುಕೊಂಡವರಿಗೆ ಈಗಾಗಲೇ ರೂ.5 ಲಕ್ಷ ಪರಿಹಾರ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಪ್ರವಾಸ ತೆರಳಿದ್ದು, 15-20 ದಿನಗಳ ಕಾಲ ಪರಿಶೀಲನೆ ನಡೆಸುತ್ತೇನೆ. ಮೊದಲ ಕಂತಿನಲ್ಲಿ ಕೇಂದ್ರ ಸರ್ಕಾರ ಈಗಾಗಲೇ ರೂ.1,200 ಕೋಟಿ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಹಾರ ಬಿಡುಗಡೆ ಮಾಡುವ ನಿರೀಕ್ಷೆಗಳಿವೆ ಎಂದು ಹೇಳಿದ್ದಾರೆ. 

ಇದೇ ವೇಳೆ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಕುರಿತಂತೆ ಮಾತನಾಡಿದ ಅವರು. ಆ ರಾಜ್ಯದಲ್ಲಿಯೂ ಬಿಜೆಪಿ ಗೆಲವು ಸಾಧಿಸಲಿದೆ. ಜನಪರವಾಗಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಅಭಿವೃದ್ಧಿ ಕಾರ್ಯಗಳನ್ನು ಜನರು ಎಂದಿಗೂ ಮರೆಯುವುದಿಲ್ಲ. ಬಿಜೆಪಿ-ಶಿವಸೇನೆ ಮೈತ್ರಿ ಮಹಾರಾಷ್ಟ್ರ ಚುನಾವಣೆಯಲ್ಲಿ ಗೆಲವು ಸಾಧಿಸಲಿದೆ. ಪ್ರಧಾನಿ ಮೋದಿಯವರು ಹೇಳಿದಂತೆಯೇ ಶೀಘ್ರದಲ್ಲಿಯೇ ದೇಶ ಕಾಂಗ್ರೆಸ್ ಮುಕ್ತ ರಾಷ್ಟ್ರವಾಗಲಿದೆ ಎಂದು ತಿಳಿಸಿದ್ದಾರೆ.  

ಪ್ರವಾಹ ಪರಿಹಾರ ಕುರಿತಂತೆ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂಬ ಶಾಸಕ ಬಸವರಾಜ ಪಾಟೀಲ್-ಯತ್ನಾಳ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ವಿವಾದಾತ್ಮಕ ಹೇಳಿಕೆ ನೀಡದಂತೆ ಪಾಟೀಲ್-ಯತ್ನಾಳ್'ಗೆ ಸೂಚನೆ ನೀಡಲಾಗಿದೆ. ಮೈತ್ರಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ಶಾಸಕರಿಗೆ ಮುಂದಿನ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವುದಿಲ್ಲ ಎಂಬುದೆಲ್ಲಾ ಸುಳ್ಳು. ಇಂತಹ ಬೆಳವಣಿಗೆಗಳು ನನ್ನ ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. 

ಪೊಲೀಸ್ ವೇತನ ಕುರಿತ ಔರಾದ್ಕರ್ ಸಮಿತಿ ವರದಿಯನ್ನು ಶೀಘ್ರದಲ್ಲಿಯೇ ಜಾರಿಗೆ ತರಲಾಗುತ್ತದೆ. ಶೀಘ್ರದಲ್ಲಿಯೇ ಪೊಲೀಸರಿಗೆ ಶುಭ ಸುದ್ದಿ ಕಾದಿದೆ ಎಂದು ಹೇಳಿದ್ದಾರೆ. 

ಇನ್ನಿತರೆ ಕೆಲಸಗಳ ನಿಮಿತ್ತ ಕಂದಾಯ ಸಚಿವ ಆರ್.ಅಸೋಕ್ ಅವರು ಬೆಳಗಾವಿ ಹಾಗೂ ನೆರೆ ಜಿಲ್ಲೆಗಳಿಗೆ ಭೇಟಿ ನೀಡಲು ಸಾಧ್ಯವಾಗಿಲ್ಲ. ಈ ವರೆಗೂ 5-6 ಬಾರಿ ನಾನು ಬೆಳಗಾವಿಗೆ ಭೇಟಿ ನೀಡಿದ್ದೇನೆ. ಚಳಿಗಾಳ ಅಧಿವೇಶನದಲ್ಲಿ ಪ್ರವಾಹ ಪರಿಹಾರ ಕುರಿತ ಪ್ರಶ್ನೆಗೆ ಈಗಾಗಲೇ ಅಶೋಕ್ ಅವರು ಖಡಕ್ ಆಗಿಯೇ ಉತ್ತರ ನೀಡಿದ್ದಾರೆಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com