ಜನವರಿಯಲ್ಲಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನ: ಗೋವಿಂದ ಕಾರಜೋಳ

ಕಲಬುರಗಿಯಲ್ಲಿ ನಡೆಯಬೇಕಿರುವ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿಯಲ್ಲಿ ಆಯೋಜಿಸುವ ಬಗ್ಗೆ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ

ಕಲಬುರಗಿ: ಕಲಬುರಗಿಯಲ್ಲಿ ನಡೆಯಬೇಕಿರುವ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿಯಲ್ಲಿ ಆಯೋಜಿಸುವ ಬಗ್ಗೆ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್‌ನಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ‌ಇದೆ. ಚುನಾವಣೆಗಳು ಬಂದರೆ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುತ್ತಾರೆ. ಹೀಗಾಗಿ ಸಮ್ಮೇಳನ ವ್ಯವಸ್ಥಿತವಾಗಿ ನಡೆಸಲು ಅಡ್ಡಿಯಾಗುವ ಸಾಧ್ಯತೆ ಇದೆ.‌ ಜನವರಿಯಲ್ಲಿ ಅದ್ದೂರಿಯಾಗಿ ನಡೆಸಬಹುದು ಎಂದು ತಿಳಿಸಿದ್ದಾರೆ.

ಸಮ್ಮೇಳನದ ಕುರಿತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ಅವರು ನನ್ನನ್ನು ಭೇಟಿ ಮಾಡಿದ್ದಾರೆ. ಅವರಿಗೂ ವಿಷಯ ತಿಳಿಸಿದ್ದೇನೆ ಎಂದು ಕಾರಜೋಳ ವಿವರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com