ಕೊಡಗು: ಭಾರೀ ಮಳೆ ಮುನ್ಸೂಚನೆ, ಮೂರು ದಿನ 'ಆರೆಂಜ್ ಆಲರ್ಟ್' ಘೋಷಣೆ

ಅರಬ್ಬೀ ಸಮುದ್ರ ಹಾಗೂ ಲಕ್ಷ ದ್ವೀಪದಲ್ಲಿ  ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ  ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಮೂರು ದಿನ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಡಿಕೇರಿ: ಅರಬ್ಬೀ ಸಮುದ್ರ ಹಾಗೂ ಲಕ್ಷ ದ್ವೀಪದಲ್ಲಿ  ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ  ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಮೂರು ದಿನ ಆರೆಂಜ್ ಆಲರ್ಟ್ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ 115 ಮಿಲಿ ಮೀಟರ್ ಮಳೆಯಾಗುವ  ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರದಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ಪ್ರವಾಹದ ಹೊಡೆತಕ್ಕೆ ಸಿಲುಕಿ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಕೊಡಗಿನಲ್ಲಿ ಮತ್ತೆ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ  ಆರೆಂಜ್ ಆಲರ್ಟ್ ಘೋಷಣೆ ಮಾಡಿರುವ ಜಿಲ್ಲಾಡಳಿತ, ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಮುಂದಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com