ನೀರು ಹಂಚಿಕೆ: ಮಹಾರಾಷ್ಟ್ರ ಸರ್ಕಾರದೊಂದಿದೆ ಸಿಎಂ ಯಡಿಯೂರಪ್ಪ ಚರ್ಚೆ

ಉಭಯ ರಾಜ್ಯಗಳ ನಡುವಿನ ನೀರು ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹಾರಾಷ್ಟ್ರ ಸರ್ಕಾರದೊಂದಿಗೆ ಗುರುವಾರ ಚರ್ಚೆ ನಡೆಸಿದ್ದಾರೆ. 
ಶ್ರೀ ದತ್ತಾತ್ರೇಯ ದೇಗುಲಕ್ಕೆ ಭೇಟಿ ನೀಡಿದ ಸಿಎಂ
ಶ್ರೀ ದತ್ತಾತ್ರೇಯ ದೇಗುಲಕ್ಕೆ ಭೇಟಿ ನೀಡಿದ ಸಿಎಂ

ಕಲಬುರಗಿ: ಉಭಯ ರಾಜ್ಯಗಳ ನಡುವಿನ ನೀರು ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಹಾರಾಷ್ಟ್ರ ಸರ್ಕಾರದೊಂದಿಗೆ ಗುರುವಾರ ಚರ್ಚೆ ನಡೆಸಿದ್ದಾರೆ. 

ಮಹಾರಾಷ್ಟ್ರದಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ಆರಂಭಗೊಳ್ಳಲಿದ್ದು, ಈ ಹಿನ್ನಲೆಯಲ್ಲಿ ಪ್ರಚಾರಕ್ಕಾಗಿ ಯಡಿಯೂರಪ್ಪ ಅವರು ಮಹಾರಾಷ್ಟ್ರ ಗಡಿ ಪ್ರದೇಶಗಳಿಗೆ ತೆರಳಿದ್ದರು. ಪ್ರಚಾರ ಪೂರ್ಣಗೊಂಡ ಬಳಿಕ ಅಫ್ಜಲ್ಪುರ ತಾಲೂಕಿನ ದೇವಳ್ ಗನಗಾಪುರದಲ್ಲಿರುವ ಶ್ರೀ ದತ್ತಾತ್ರೇಯ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಏಳಿಗೆಗಾಗಿ ಹಾಗೂ ಪ್ರವಾಹ ಪೀಡಿತ ಜನರಿಗೆ ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದೇನೆ. ಮಹಾರಾಷ್ಟ್ರ ರಾಜ್ಯದಲ್ಲಿ ಬಿಜೆಪಿ ಸರ್ಕಾರ 5 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಮುಂದಿನ ಬಾರಿಯೂ ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದರು ಹೇಳಿದರು. 

ಇದೇ ವೇಳೆ ನೆರೆ ಪರಿಹಾರ ಕಾರ್ಯವನ್ನು ನಿರ್ಲಕ್ಷಿಸುತ್ತಿರುವುದರ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. 

ಬಳಿಕ ರಾಜ್ಯ ಉಪ ಚುನಾವಣೆ ಬಳಿಕ ಬಿಜೆಪಿ ಸರ್ಕಾರ ಕುಸಿದು ಬೀಳಲಿದೆ ಎಂಬ ವಿರೋಧ ಪಕ್ಷಗಳ ಭವಿಷ್ಯವನ್ನು ಅಲ್ಲಗೆಳೆದ ಅವರು, ನಮ್ಮ ಸರ್ಕಾರ ಅವಧಿಯನ್ನು ಪೂರ್ಣಗೊಳಿಸಲಿದೆ ಎಂದಿದ್ದಾರೆ. 

ಮಹಾರಾಷ್ಟ್ರದೊಂದಿಗೆ ಸಂಧಾನ ಮಾಡಿಕೊಳ್ಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಬೇಸಿಗೆಯಲ್ಲಿ ಎದುರಾಗುವ ನೀರಿನ ಬೇಗೆ ನೀಗಿಸಲು ಕೃಷ್ಣ ಮತ್ತು ಭೀಮಾ ನದಿಗಳಿಗೆ 4 ಟಿಎಂಸಿ ನೀರನ್ನು ಒದಗಿಸಬೇಕಾಗಿದೆ ಎಂದು ತಿಳಿಸಿದ್ದಾರೆ. 

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಯಡಿಯೂರಿಗೆ ಭೇಟಿ ನೀಡಲಿದ್ದು, ಯಡಿಯೂರು ಸಿದ್ದಲಿಂಗೇಶ್ವರ ದೇಗುಲಕ್ಕೆ ಭೇಟಿ ನೀಡಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com