ಎರಡು ಮಹಾನಗರ ಪಾಲಿಕೆ ಸೇರಿದಂತೆ 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

ರಾಜ್ಯ ಚುನಾವಣಾ ಆಯೋಗ ಭಾನುವಾರ ದಾವಣಗೆರೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ಘೋಷಿಸಿದ್ದು, ನವೆಂಬರ್ 12ರಂದು ಮತದಾನ ನಡೆಯಲಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಭಾನುವಾರ ದಾವಣಗೆರೆ ಮತ್ತು ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ಘೋಷಿಸಿದ್ದು, ನವೆಂಬರ್ 12ರಂದು ಮತದಾನ ನಡೆಯಲಿದೆ.

ಎರಡು ಮಹಾನಗರ ಪಾಲಿಕೆ, ಆರು ನಗರ ಸಭೆ, ಮೂರು ಪುರಸಭೆ ಹಾಗೂ ಮೂರು ಪಟ್ಟಣ ಪಂಚಾಯತ್ ಸೇರಿದಂತೆ ಒಟ್ಟು 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ದಿನಾಂಕ ಪ್ರಕಟಿಸಲಾಗಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.

ದಾವಣಗೆರೆಯ 45 ಹಾಗೂ ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್ ಗಳಿಗೆ ನ.12ರಂದು ನಡೆಯಲಿರುವ ಚುನಾವಣೆಗೆ ಅ.31 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ನ. 2ರಂದು ನಾಮಪತ್ರ ಪರಿಶೀಲಿಸಲಾಗುವುದು ಹಾಗೂ ನ.4 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ.

ನ. 12ರಂದು ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದ್ದು, ಅಗತ್ಯವಿದ್ದಲ್ಲಿ ನ.13ರಂದು ಮರು ಮತದಾನ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ನ.14ರಂದು ಬೆಳಗ್ಗೆ 8ರಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗಲಿದೆ.

ಇನ್ನು ಚಾಮರಾಜನಗರ ಜಿಲ್ಲಾ ಪಂಚಾಯತ್ ಸೇರಿದಂತೆ ಚಾಮರಾಜನಗರ, ಉಡುಪಿ, ಗದಗ ಹಾಗೂ ಕೊಪ್ಪಳದ ತಾಲೂಕು ಪಂಚಾಯತ್ ಹಾಗೂ ಗ್ರಾಮಪಂಚಾಯತ್‌ಗಳಲ್ಲಿ ತೆರವುಗೊಂಡಿರುವ 213 ಸದಸ್ಯ ಸ್ಥಾನಗಳಿಗೂ ಉಪ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 31 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನವಂಬರ್ 12 ರಂದು ಮತದಾನ ನಡೆಯಲಿದ್ದು 14 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com