ಅನುದಾನ ಸದ್ಬಳಕೆ ಮಾಡದೆ ನಿರ್ಲಕ್ಷ್ಯ: ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಶ್ರೀರಾಮುಲು 

ಆರೋಗ್ಯ ಇಲಾಖೆಯಲ್ಲಿ ಅನುದಾನ ಇದ್ದರೂ ಸದ್ಬಳಕೆ ಮಾಡಿಕೊಂಡು ಬಡವರಿಗೆ ಸೂಕ್ತ ವೈದ್ಯಕೀಯ ಸೇವೆ ನೀಡಲು ನಿರ್ಲಕ್ಷ್ಯವಹಿಸಿದ ಆರೋಗ್ಯಾಧಿಕಾರಿಗಳನ್ನು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. 
ಶ್ರೀರಾಮುಲು
ಶ್ರೀರಾಮುಲು

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಅನುದಾನ ಇದ್ದರೂ ಸದ್ಬಳಕೆ ಮಾಡಿಕೊಂಡು ಬಡವರಿಗೆ ಸೂಕ್ತ ವೈದ್ಯಕೀಯ ಸೇವೆ ನೀಡಲು ನಿರ್ಲಕ್ಷ್ಯವಹಿಸಿದ ಆರೋಗ್ಯಾಧಿಕಾರಿಗಳನ್ನು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. 

ವಿಕಾಸಸೌಧದಲ್ಲಿ ನಿನ್ನೆ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವ ವೇಳೆ ಅನುದಾನ ಬಳಕೆ ಮಾಡಿಕೊಳ್ಳದೆ ನಿರ್ಲಕ್ಷ್ಯವಹಿಸಿದ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲಗೊಂಡರು. ಅಲ್ಲದೆ, ಎಲ್ಲಾ ಜಿಲ್ಲೆಗಳ ಮುಖ್ಯ ಆರೋಗ್ಯಾಧಿಕಾರಿಗಳೂ ಡಿಸೆಂಬರ್ ಒಳಗಾಗಿ ಶೇ.90ರಷ್ಟು ಅನುದಾನ ಬಳಕೆ ಮಾಡಬೇಕು ೆಂದು ಕಟ್ಟಿನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಆರೋಗ್ಯಾಧಿಕಾರಿಗಳು, ಶಸ್ತ್ರಚಿಕಿತ್ಸರು, ನಿರ್ದೇಶಕರು, ಸಹನಿರ್ದೇಶಕರು, ಜಂಟಿ ನಿರ್ದೇಶಕರು, ಆರ್.ಸಿ.ಹೆಚ್, ಅಧಿಕಾರಿಗಳು, ಅಧೀಕ್ಷಕರು ಸೇರಿದಂತೆ ಆರೋಗ್ಯ ಇಲಾಖೆಯ ಎಲ್ಲಾ ಹಿರಿಯ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. 

ಬಳಿಕ ಮಾತನಾಡಿರುವ ಅವರು, ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಹಣವಿದೆ. ಆದರೆ, ಅದರ ಸದ್ಬಳಕೆಗೆ ವ್ಯವಸ್ಥೆ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ಬಡವರಿಗೆ, ಸಾರ್ವಜನಿಕರಿಗೆ ಆರೋಗ್ಯ ಸೇವೆ ತಲುಪುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಬಡವರಿಗೆ ವಿಶ್ವಾಸ ಮೂಡುತ್ತಿಲ್ಲ. ಜಿಲ್ಲಾವಾರು ನೀಡಲಾದ ನಿಧಿಯ ಬಳಕೆ ಮಾಡಿಕೊಳ್ಳದಿದ್ದರೆ ವಾಪಸ್ಸು ನೀಡಬೇಕಾಗುತ್ತದೆ. ಮತ್ತೆ ಕೇಂದ್ರ ಸರ್ಕಾರದ ಬಳಿ ಅನುದಾನ ಕೇಳಲು ಆಗುವುದಿಲ್ಲ. ಹೀಗಿದ್ದರೂ ಬಹುತೇಕ ಜಿಲ್ಲೆಗಳಲ್ಲಿ ಕ್ರಿಯಾಯೋಜನೆ ರೂಪಿಸುವುದು, ಔಷಧ, ಉಪಕರಣ ಖರೀದಿಯಂತಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com