ಉಡುಪಿಯಲ್ಲಿ ಭಾರೀ ಮಳೆ, 3 ದಿನ ರೆಡ್ ಅಲರ್ಟ್ ಘೋಷಣೆ

ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದ್ದು ಮುಂದಿನ ಮೂರು ದಿನ ಕೂಡ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ‌ ಇಲಾಖೆ ಮುನ್ಸೂಚನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಉಡುಪಿ:  ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದ್ದು ಮುಂದಿನ ಮೂರು ದಿನ ಕೂಡ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ‌ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.

ಈ ವಾರವಿಡಿ ರಾಜ್ಯದ ಅನೇಕ ಕಡೆ ಭಾರಿ ಮಳೆಯಾಗಲಿದೆ ಎಂದೂ ಸಹ ಹವಾಮಾನ ಇಲಾಖೆ ತಿಳಿಸಿದೆ. ಕಳೆದೆರಡು ತಿಂಗಳ ಹಿಂದೆ ನೆರೆ ಹಾವಳಿಗೆ ತುತ್ತಾಗಿದ್ದ ಬೆಳಗಾವಿ, ಚೇತರಿಕೆಗೂ ಮುನ್ನವೇ ಮತ್ತೆ ಅಲ್ಲಿ ಮಳೆ ಬಿದ್ದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com