ಚಿತ್ರದುರ್ಗ: ಭಾರೀ ಮಳೆಗೆ ಕುಸಿದುಬಿದ್ದ ಗೋಡೆ, ವೃದ್ದೆ ಸಾವು

ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಬಿದ್ದಿದ್ದು ಪರಿಣಾಮ 80 ವರ್ಷದ ವೃದ್ದೆಯೊಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಶ್ರೀರಾಂಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಿತ್ರದುರ್ಗ: ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಬಿದ್ದಿದ್ದು ಪರಿಣಾಮ 80 ವರ್ಷದ ವೃದ್ದೆಯೊಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಶ್ರೀರಾಂಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. 

ಬುದೇಂಬಿ (80) ಮೃತ ವೃದ್ದೆಯಾಗಿದ್ದಾರೆ. ಮನೆಯಲ್ಲಿ ನಿದ್ರಿಸುತ್ತಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಗೋಡೆ ಕುಸಿದು ಬಿದ್ದಿದೆ. 

ಕಳೆದ ಭಾನುವಾರದಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಸುದೀರ್ಘವಾಗಿ ಭಾರೀ ಮಳೆ ಸುರಿಯುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com