ಬಾಗಲಕೋಟೆ: ಪ್ರಾಮಾಣಿಕವಾಗಿ ಸರ್ವೇ ಕೆಲಸ ಮಾಡಲು ಡಿಸಿಎಂ ಕಾರಜೋಳ ಸಲಹೆ

ಕಳೆದ ಮುರ್ನಾಲ್ಕು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಾದ ಮನೆ ಹಾನಿ, ಬೆಳೆಹಾನಿ, ಜನ-ಜಾನುವಾರುಗಳ ಸಮೀಕ್ಷೆಯನ್ನು ಅಧಿಕಾರಿಗಳು ನಿಷ್ಪಕ್ಷಪಾತವಾಗಿ, ಮಾನವೀಯತೆಯಿಂದ, ಪ್ರಾಮಾಣಿಕವಾಗಿ ನಿರ್ವಹಿಸುವಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸಲಹೆ ಮಾಡಿದರು.
ಬಾಗಲಕೋಟೆ: ಪ್ರಾಮಾಣಿಕವಾಗಿ ಸರ್ವೇ ಕೆಲಸ ಮಾಡಲು ಡಿಸಿಎಂ ಕಾರಜೋಳ ಸಲಹೆ
ಬಾಗಲಕೋಟೆ: ಪ್ರಾಮಾಣಿಕವಾಗಿ ಸರ್ವೇ ಕೆಲಸ ಮಾಡಲು ಡಿಸಿಎಂ ಕಾರಜೋಳ ಸಲಹೆ

ಬಾಗಲಕೋಟೆ: ಕಳೆದ ಮುರ್ನಾಲ್ಕು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಾದ ಮನೆ ಹಾನಿ, ಬೆಳೆಹಾನಿ, ಜನ-ಜಾನುವಾರುಗಳ ಸಮೀಕ್ಷೆಯನ್ನು ಅಧಿಕಾರಿಗಳು ನಿಷ್ಪಕ್ಷಪಾತವಾಗಿ, ಮಾನವೀಯತೆಯಿಂದ, ಪ್ರಾಮಾಣಿಕವಾಗಿ ನಿರ್ವಹಿಸುವಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸಲಹೆ ಮಾಡಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಬುಧವಾರ ನಡೆದ ಜಿಲ್ಲೆಯ ಪ್ರವಾಹ ಪರಿಹಾರ ಹಾಗೂ ಅತಿವೃಷ್ಟಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ಪ್ರವಾಹದಿಂದಾದ ಸಂತ್ರಸ್ಥರಿಗೆ ಎಲ್ಲ ರೀತಿಯ ಪರಿಹಾರ ಒದಗಿಸಲಾಗುತ್ತಿದೆ. ಇತ್ತೀಚೆಗೆ ಮಳೆಯಿಂದ ಆಗಿರುವ ಹಾನಿಯನ್ನು ನಿಷ್ಪಕ್ಷಪಾತವಾಗಿ ಮಾನವೀಯತೆಯಿಂದ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕು.. ಸಮೀಕ್ಷೆಯಲ್ಲಿ ಮಣ್ಣಿನ ಮನೆಗಳಿಗೆ ಹೆಚ್ಚು ಗಮನ ಕೊಟ್ಟು ಸೂಕ್ತ ಪರಿಹಾರ ಕೊಡುವ ಕೆಲಸವಾಗಬೇಕು. ರೈತರ ಹೊಲದಲ್ಲಿ ಕಟ್ಟಿದ ಮನೆ ಹಾನಿಗಳನ್ನು ಪಾರ್ಮ ಹೌಸ್ ಎಂದು ಸಮೀಕ್ಷೆಯಲ್ಲಿ ಪರಿಗಣಿಸುವಂತೆ ತಿಳಿಸಿದರು. ಇಡೀ ಜಿಲ್ಲೆಯಾದ್ಯಂತ ಸಮೀಕ್ಷೆ ಕೈಗೊಳ್ಳಲು ಸೂಚಿಸಿದರು.

ಕಳೆದ ಮೂರು ದಿನಗಳಿಂದ ಸುರಿದ ಮಳೆ ಹಾಗೂ ನದಿಗಳ ಪ್ರವಾಹದಿಂದ ಜಿಲ್ಲೆಯಲ್ಲಿ ಒಟ್ಟು 109 ಗ್ರಾಮಗಳು ಬಾಧಿಗೊಂಡಿವೆ. 888 ಬಾಗಶಃ ಮನೆಗಳು ಹಾನಿಗೊಳಗಾಗಿವೆ. 853 ಕುಟುಂಬಗಳ ಬಾಧಿಗೊಂಡಿದ್ದು, ಈ ಪೈಕಿ ಹುನಗುಂದ ತಾಲೂಕಿನಲ್ಲಿ ಒಟ್ಟು 6 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಒಟ್ಟು 3404 ಸಂತ್ರಸ್ತರು ಪರಿಹಾರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಈ ನೆರೆ ಹಾಗೂ ಪ್ರವಾಹದಿಂದ ಬಾದಾಮಿ ತಾಲೂಕಿನ ಶಿರಬಡಗಿ ಗ್ರಾಮದ ರಾಮಪ್ಪ ಮಲ್ಲಪ್ಪ ಹೊನ್ನನ್ನವರ ಪ್ರವಾಹದಿಂದ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ. 17 ಜಾನುವಾರುಗಳು ಹಾಗೂ 4480 ಕೋಳಿಗಳು ಜೀವಹಾನಿಯಾಗಿದ್ದು, ತಕ್ಷಣ ಪರಿಹಾರ ನೀಡುವಂತೆ ತಹಶೀಲ್ದಾರರಿಗೆ ಸೂಚಿಸಿದರು.

ಸಭೆಯಲ್ಲಿ ಜಿಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಉಪಾದ್ಯಕ್ಷ ಮುತ್ತಪ್ಪ ಕೋಮಾರ, ಡಿಸಿ ಡಾ.ಕೆ.ರಾಜೇಂದ್ರ, ಎಸ್ಪಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಗಂಗೂಬಾಯಿ ಮಾನಕರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ವಿಠ್ಠಲ ಆರ್. ಬಲಕುಂದಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com