ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್

ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಬಹು ನಿರೀಕ್ಷಿತ ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. 
ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಗ್ರೀನ್ ಸಿಗ್ನಲ್

ಬೆಂಗಳೂರು: ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಬಹು ನಿರೀಕ್ಷಿತ ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. 
 
ಯೋಜನೆಗೆ ಕೇಂದ್ರ ಒಪ್ಪಿಗೆ ನೀಡಿರುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಕಳಸಾ ಬಂಡೂರಿ ನಾಲಾ ಯೋಜನೆ ಪ್ರಾರಂಭಿಸಲು ಕೇಂದ್ರ ಪರಿಸರ ಇಲಾಖೆ ಅನುಮತಿ ನೀಡಿದ್ದು. ಇದರಿಂದ ಯೋಜನೆಯ ಅನುಷ್ಠಾನಕ್ಕೆ ಶೇ.90ರಷ್ಟು ದಾರಿ ಸುಗಮವಾಗಿದೆ. ಪರಿಸರ ಇಲಾಖೆ ನೀಡಿರುವ ಅನುಮತಿ ವಿಚಾರವನ್ನು ಸುಪ್ರೀಂಕೋರ್ಟ್ ಗಮನಕ್ಕೆ ತಂದು ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು. 

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಕಳಸಾ ಬಂಡೂರಿ ನಾಲಾ ಯೋಜನೆಯನ್ನು ಆರಂಭಿಸುವ ಕುರಿತು ಪ್ರಧಾನಿ ಮೋದಿ ಭರವಸೆ ನೀಡಿದ್ದತು. ನೀಡಿದ ಆಶ್ವಾಸನೆಯಂತೆ ಇದೀಗ ಕೇಂದ್ರ ಪರಿಸರ ಇಲಾಖೆ ಯೋಜನೆ ಪ್ರಾರಂಭಿಸಲು ಯಾವುದೇ ತಕರಾರು ಇಲ್ಲ ಎಂದು ಹೇಳಿದೆ. ಇದರಿಂದ ಯೋಜನೆಗೆ ಎದುರಾಗಿದ್ದ ತೊಡಕುಗಳು ನಿವಾರಣೆಯಾದಂತಾಗಿದೆ ಎಂದು ತಿಳಿಸಿದರು. 
 
ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಪರಿಸರ ಸಚಿವಾಲಯ ಅನುಮೋದನೆ ನೀಡಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ ಜವಡೇಕರ್ ಟ್ವೀಟ್ ಮಾಡಿದ್ದರು. ನಮ್ಮ ಸಹೋದ್ಯೋಗಿ ಪ್ರಹ್ಲಾದ ಜೋಶಿ ಅವರ ಆಗ್ರಹದ ಮೇರೆಗೆ ಯೋಜನೆಗೆ ಅನುಮೋದನೆ ನೀಡಿದೇವೆಂದು ಹೇಳಿದ್ದರು. ಆದರೆ, ಜವಡೇಕರ್ ಅವರ ಹೇಳಿಕೆ ಕುರಿತು ಬಿಜೆಪಿಯದ್ದೇ ಆಡಳಿತವಿರುವ ನೆರೆಯ ಗೋವಾದಲ್ಲಿ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ, ರಾತ್ರಿ ವೇಳೆಗೆ ಟ್ವೀಟ್ ಡಿಲೀಟ್ ಮಾಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com