ಮಂಗಳೂರು: ವಾಯುಭಾರ ಕುಸಿತ, ಸಮುದ್ರ ಪ್ರಕ್ಷುಬ್ಧ

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಉಳ್ಳಾಲದಲ್ಲಿ ಸಮುದ್ರದ ಅಲೆಗಳು ದಡಕ್ಕೆ ಬಿರುಸಿನಿಂದ ಅಪ್ಪಳಿಸುತ್ತಿದ್ದು, ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ ಸಮುದ್ರ ತೀರದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಉಳ್ಳಾಲದಲ್ಲಿ ಸಮುದ್ರದ ಅಲೆಗಳು ದಡಕ್ಕೆ ಬಿರುಸಿನಿಂದ ಅಪ್ಪಳಿಸುತ್ತಿದ್ದು, ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ ಸಮುದ್ರ ತೀರದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಸೋಮೇಶ್ವರ ದೇವಸ್ಥಾನ ಬಳಿಯ ಮೋಹನ್ ಎಂಬವರ ಮನೆಗೆ ಭಾರೀ ಅಲೆಗಳು ಅಪ್ಪಳಿಸುತ್ತಿವೆ. ಉಚ್ಚಿಲದ ಬಟ್ಟಂಪ್ಪಾಡಿ ಸಮೀಪ ನಾಲ್ಕು ತೆಂಗಿನ ಮರಗಳು ಧರಾಶಾಹಿಯಾಗಿವೆ. ಪೇರಿಬೈಲ್ ಎಂಬಲ್ಲಿ ಝೊಹರಾ ಅಬ್ದುಲ್ಲ ಎಂಬವರ ಮನೆಗೂ ಸಮುದ್ರದ ದೈತ್ಯ ಅಲೆಗಳು ಅಪ್ಪಳಿಸುತ್ತಿವೆ. ಜೋರಾಗಿ ಬೀಸುತ್ತಿರುವ ಗಾಳಿಯ ಪರಿಣಾಮವಾಗಿ ಕಡಲ್ಕೊರೆತ ಉಂಟಾಗಿ ಅಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ತಡೆಗೋಡೆ ಸಮುದ್ರಪಾಲಾಗುತ್ತಿದೆ. ಉಚ್ಚಿಲದ ಬಟ್ಟಂಪ್ಪಾಡಿ ಸಮೀಪ ನಾಲ್ಕು ತೆಂಗಿನ ಮರಗಳು ಧರಾಶಾಯಿಯಾಗಿದೆ.

ಅರಬ್ಬಿ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದ ಕೇರಳ, ಕರ್ನಾಟಕ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ನೆಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ ರೆಡ್ ಅಲರ್ಟ್ ಸೂಚನೆ ನೀಡಿದೆ. ಸಾರ್ವಜನಿಕರು ಈ ಅವಧಿಯಲ್ಲಿ ಮುಂಜಾಗ್ರತಾ ಕ್ರಮ ವಹಿಸುವಂತೆ ಹಾಗೂ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆ ಸೂಚನೆ ನೀಡಿರುವಂತೆ ಕರಾವಳಿಯಲ್ಲಿ ಹಿಂಗಾರು ಮಳೆ ಗುರುವಾರ ಮತ್ತಷ್ಟು ಬಿರುಸುಗೊಂಡಿದೆ. ಬೆಳಗ್ಗೆಯಿಂದಲೇ ದ.ಕ., ಕಾಸರಗೋಡು ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com