ಬಂಡಿಪುರ: ಒಂಟಿ ಸಲಗ ಸೆರೆ ಕಾರ್ಯಾಚರಣೆ ಆರಂಭ

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಹಂಗಳ ಗ್ರಾಮಗಳಲ್ಲಿ ರೈತರ ಜಮೀನಿಗೆ ಲಗ್ಗೆಯಿಟ್ಟು ಇಬ್ಬರ ಮೇಲೆ ದಾಳಿ ಮಾಡಿದ್ದ ಹಾಗೂ ಜಾನುವಾರುಗಳನ್ನು ಕೊಂದಿದ್ದ ಸಲಗವನ್ನು ಅರಣ್ಯ ಇಲಾಖೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದೆ. 

Published: 24th October 2019 01:45 PM  |   Last Updated: 24th October 2019 02:01 PM   |  A+A-


Representational image

ಸಾಂದರ್ಭಿಕ ಚಿತ್ರ

Posted By : Shilpa D
Source : RC Network

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರ ಹಂಗಳ ಗ್ರಾಮಗಳಲ್ಲಿ ರೈತರ ಜಮೀನಿಗೆ ಲಗ್ಗೆಯಿಟ್ಟು ಇಬ್ಬರ ಮೇಲೆ ದಾಳಿ ಮಾಡಿದ್ದ ಹಾಗೂ ಜಾನುವಾರುಗಳನ್ನು ಕೊಂದಿದ್ದ ಸಲಗವನ್ನು ಅರಣ್ಯ ಇಲಾಖೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿದೆ. 

ಸಲಗವನ್ನು ಸೆರೆಹಿಡಿದು ಸರ್ಕಾರಕ್ಕೆ ಕಳುಹಿಸಲು ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ. ಈ ಒಂಟಿ ಸಲಗ ತಮಿಳುನಾಡಿನಿಂದ ಬಂದಿರುವುದರಿಂದ ರಾಜ್ಯ ಆರಂಭಿಸಿರುವ ಕಾರ್ಯಾಚರಣೆಗೆ ನೆರವು ನೀಡುವಂತೆ ತಮಿಳುನಾಡು ರಾಜ್ಯದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರು ಕೂಡ ಅವರು ನಿರಾಕರಿಸಿದ್ದಾರೆ ಎಂದು ಗೊತ್ತಾಗಿದೆ. 

ಜನರಿಗೆ ಉಪಟಳ ನೀಡುತ್ತಿದ್ದ ಈ ಆನೆಯನ್ನು ಅರಣ್ಯಕ್ಕೆ ಬಿಟ್ಟಿರುವ ತಮಿಳುನಾಡಿನ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮಕ್ಕೆ ರಾಜ್ಯದ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದೆ. ಉಪಟಳ ನೀಡುತ್ತಿರುವ ಗಂಡಾನೆ ಸೆರೆಹಿಡಿದು ಶಿಬಿರಕ್ಕೆ ಕಳುಹಿಸುವುದು ಉತ್ತಮವೆಂದು ಖ್ಯಾತ ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರರವರು ಅಭಿಪ್ರಾಯಪಟ್ಟಿದ್ದಾರೆ.

ಹಾಗೆಯೇ ಉಪಟಳ ನೀಡುತ್ತಿದ್ದ ಆನೆಯನ್ನು ತಮಿಳುನಾಡಿನ ರಾಜ್ಯದ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆಹಿಡಿದು ಮತ್ತೆ ಕಾಡಿಗೆ ಬಿಟ್ಟಿದ್ದೇ ತಪ್ಪು. ಹಾಗೆ ಬಿಟ್ಟರೆ ಅದು ಸಾರ್ವಜನಿಕರಿಗೆ ತೊಂದರೆ ಕೊಡುವುದು ಖಚಿತವೆಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹುಲಿ ಯೋಜನೆ ನಿರ್ದೇಶಕ ಟಿ.ಬಾಲಚಂದ್ರ ತಿಳಿಸಿದ್ದಾರೆ.

ಸಾರ್ವಜನಿಕರ ಗಮನಕ್ಕೆ ಆನೆಯು ಕಂಡುಬಂದಲ್ಲಿ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಅವರು ಮನವಿ ಮಾಡಿದ್ದಾರೆ. ಈಚೆಗೆ ಹುಲಿ ಜೀವಂತ ಸೆರೆಯಲ್ಲಿ ಭಾಗವಹಿಸಿದ್ದ ಅಭಿಮನ್ಯು ಸೇರಿದಂತೆ 6 ಆನೆಗಳನ್ನು ಹಾಗೂ ಅರಣ್ಯ ಸಿಬ್ಬಂದಿಯನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವರದಿ: ಗೂಳಿಪುರ ನಂದೀಶ ಎಂ

Stay up to date on all the latest ರಾಜ್ಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp