'ಕ್ಯಾರ್ ಚಂಡಮಾರುತ'ದಿಂದ ವ್ಯಾಪಕ ಮಳೆ: ದ.ಕ, ಉಡುಪಿ, ಮೂಡಿಗೆರೆಯಲ್ಲಿ ಶಾಲಾ ಕಾಲೇಜುಗಳಿಗೆ ಇಂದು ರಜೆ 

ಚಂಡಮಾರುತದಿಂದಾಗಿ ಕರಾವಳಿ ಪ್ರದೇಶ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಚಂಡಮಾರುತದಿಂದಾಗಿ ಕರಾವಳಿ ಪ್ರದೇಶ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.


ಮಹಾರಾಷ್ಟ್ರದ ಕೊಂಕಣ ಮತ್ತು ಗೋವಾ ತೀರ ಪ್ರದೇಶಗಳಿಗೆ ಕ್ಯಾರ್ ಚಂಡಮಾರುತ ಅಪ್ಪಳಿಸಿ ತೀವ್ರ ಮಳೆಯಾಗುತ್ತಿದ್ದು  ಇದರ ಪರಿಣಾಮ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶ ಹೊರಡಿಸಿದ್ದಾರೆ. 


ಕ್ಯಾರ್ ಚಂಡಮಾರುತ ಗಾಳಿ ಮಳೆ ಹೊತ್ತು ತರುತ್ತಿದೆ. ಈ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ  ಸಹ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಮೌಖಿಕ ಆದೇಶ ಹೊರಡಿಸಿದ್ದಾರೆ.


ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಮೀನುಗಾರರಿಗೆ, ನದಿ ಬದಿಯ ಜನ ನೀರಿಗಿಳಿಯದಂತೆ ಸೂಚಿಸಿದೆ. ಜಿಲ್ಲೆಯಾದ್ಯಂತ ಇಂದು ಬೆಳಗ್ಗೆಯವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಅದು ವಿಸ್ತರಣೆಗೊಳ್ಳುವ ಸಾಧ್ಯತೆ ಇದೆ.

ಇತ್ತ ಗೋವಾದ ಬೇತುಲ್‍ನಲ್ಲಿ ಅಲೆಯಬ್ಬರಕ್ಕೆ ಮುಳುಗ್ತಿದ್ದ ದೋಣಿಯಲ್ಲಿದ್ದವರನ್ನ ರಕ್ಷಣೆ ಮಾಡಲಾಗಿದೆ. ಮುರುಡೇಶ್ವರ ಕಡಲ ತೀರದಲ್ಲಿ ಅಂಗಡಿಗಳಿಗೆ ಸಮುದ್ರದ ಅಲೆ ನುಗ್ಗಿ ವಸ್ತುಗಳೆಲ್ಲ ಕೊಚ್ಚಿಕೊಂಡು ಹೋಗಿದೆ. ಗುರುವಾರದಿಂದಲೇ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗುತ್ತಿದ್ದು, ಸಮುದ್ರದಲ್ಲಿ ಅಲೆಗಳು ಅಬ್ಬರಿಸುತ್ತಿವೆ. ಸಮುದ್ರ ಕೊರೆತ ಉಂಟಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ನಿನ್ನೆ ಸಂಜೆಯಿಂದಲೇ ಬಿರುಗಾಳಿ ಮಳೆಯಾಗುತ್ತಿದ್ದು, ಮೂಡಿಗೆರೆ ತಾಲೂಕಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com