ಶಾಸಕರ ಶಿಫಾರಸ್ಸಿನಿಂದ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದರೆ ಮಾಹಿತಿ ನೀಡಿ: ಸರ್ಕಾರಕ್ಕೆ 'ಹೈ' ಸೂಚನೆ

ಶಾಸಕರ ಶಿಫಾರಸಿನ ಮೇಲೆ ನಿಯಮ ಬಾಹಿರವಾಗಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿರುವ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಶಾಸಕರ ಶಿಫಾರಸಿನ ಮೇಲೆ ನಿಯಮ ಬಾಹಿರವಾಗಿ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿರುವ ಕುರಿತು ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚಿಸಿದೆ.
 
ಅಖಿಲ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ.ಶಶಿಧರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರದಿದ್ದ ವಿಭಾಗೀಯ ನ್ಯಾಯಪೀಠ ನಡೆಸಿದತು. ಪೊಲೀಸ್ ಅಧಿಕಾರಿಗಳ ವರ್ಗಾವಣೆಯ ಅಧಿಕಾರ ಪೊಲೀಸ್ ಸಿಬ್ಬಂದಿ ಮಂಡಳಿಗೆ ಇರುತ್ತದೆ. ವರ್ಗಾವಣೆಯಲ್ಲಿ ಶಾಸಕರ ಶಿಫಾರಸು ಪತ್ರ ಪರಿಗಣಿಸಲು ಸಾಧ್ಯವಿಲ್ಲ. ಹೀಗಾಗಿ ಶಿಫಾರಸು ಪತ್ರಗಳನ್ನು ಪರಿಗಣಿಸಿಲ್ಲ ಎಂಬುದರ ಕುರಿತು ಹಾಗೂ ಇಲ್ಲಿಯವರೆಗೆ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಿರುವ ಕುರಿತ ಕ್ರಮಗಳ ಬಗ್ಗೆ ಪ್ರಮಾಣ ಪತ್ರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹಾಗೂ ಪೊಲೀಸ್ ಸಿಬ್ಬಂದಿ ಮಂಡಳಿಗೆ ನ್ಯಾಯಪೀಠ ನಿರ್ದೇಶಿಸಿದೆ. ಅಲ್ಲದೆ, ಪ್ರತಿವಾದಿಗಳಾಗಿರುವ 24 ಶಾಸಕರಿಗೆ ಆಕ್ಷೇಪಣೆ ಸಲ್ಲಿಸರು ಒಂದು ತಿಂಗಳು ಕಾಲಾವಕಾಶ ನೀಡಿ, ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿದೆ. 

ಸುಪ್ರೀಂಕೋರ್ಟ್, ಪ್ರಕಾಶ್ ಸಿಂಗ್ ಮತ್ತು ಕೇಂದ್ರ ಸರ್ಕಾರದ ನಡುವಿನ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳಉ ವರ್ಗಾವಣೆಯನ್ನು ಪೊಲೀಸ್ ಸಿಬ್ಬಂದಿ ಮಂಡಳಿಯೇ ನಡೆಸಬೇಕೆಂದು 2006ರಲ್ಲಿ ಆದೇಶಿಸಿತ್ತು. ಹೈಕೋರ್ಟ್ ಕೂಡ 2017ರಲ್ಲಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ, ವರ್ಗಾವಣೆಗಳನ್ನು ನಿಯಮದ ಪ್ರಕಾರವೇ ಮಾಡಬೇಕೆಂದು ಆದೇಶಿಸಿತ್ತು. ಆದರೂ, ಶಾಸಕರು, ಸಂಸದರ ಶಿಫಾರಸ್ಸಿನ ಮೇರೆಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತದೆ ಎಂದು ಶಶಿಧರ್ ಅವರು ಪಿಐಎಲ್ ಅರ್ಜಿ ಸಲ್ಲಿಸಿದ್ದರು. 

ನಿಯಮ ಬಾಹಿರವಾಗಿ ಶಿಫಾರಸು ಮಾಡಿ 24 ಶಾಸರಕ ವಿರುದ್ಧ ಕ್ರಮಕೈಗೊಳ್ಳಲು 2019ರ ಜ.12ರಂದು ಸ್ಪೀಕರ್'ಗೆ ದೂರು ನೀಡಲಾಗಿದೆ. ಆ ದೂರಿನ ಅನ್ವಯ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಸ್ಐಟಿ ತನಿಖೆಗೆ ನಿರ್ದೇಶಿಸಬೇಕು. ಕೋರ್ಟ್ ಆದೇಶದಂತೆ ವರ್ಗಾವಣೆಗಳನ್ನು ಕಡ್ಡಾಯವಾಗಿ ಪೊಲೀಸ್ ಸಿಬ್ಬಂದಿ ಮಂಡಳಿ ಮೂಲಕವೇ ಮಾಡುವಂತೆ ಸೂಚನೆ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com