ಶಿವಮೊಗ್ಗದಲ್ಲಿ ಹದಗೆಟ್ಟ ರಸ್ತೆ: ಹೊಂಡ, ಗುಂಡಿಗಳಿಗೆ ಗಿಡ ನೆಟ್ಟು ವಿದ್ಯಾರ್ಥಿಗಳ ಪ್ರತಿಭಟನೆ 

ರಸ್ತೆಗಳ ಸ್ಥಿತಿ ಹದಗೆಟ್ಟು ಹೋಗಿದ್ದು ಚುನಾಯಿತ ಪ್ರತಿನಿಧಿಗಳು ಗಮನಹರಿಸುವುದಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ: ರಸ್ತೆಗಳ ಸ್ಥಿತಿ ಹದಗೆಟ್ಟು ಹೋಗಿದ್ದು ಚುನಾಯಿತ ಪ್ರತಿನಿಧಿಗಳು ಗಮನಹರಿಸುವುದಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.


ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಸಂಸದ ಬಿ ವೈ ರಾಘವೇಂದ್ರ ಮತ್ತು ಹಿರಿಯ ಸಚಿವ ಕೆ ಎಸ್ ಈಶ್ವರಪ್ಪ ಅವರು ಶಿವಮೊಗ್ಗ ಜಿಲ್ಲೆಯವರಾದರೂ ಕೂಡ ಜಿಲ್ಲೆಯ ರಸ್ತೆಗಳ ಪರಿಸ್ಥಿತಿ ಮಾತ್ರ ಬದಲಾಗಿಲ್ಲ. ಹೊಂಡ-ಗುಂಡಿಗಳಿಂದ ರಸ್ತೆಗಳು ತುಂಬಿ ವಾಹನ ಸವಾರರಿಗೆ ಪ್ರಯಾಣಿಸುವುದು ಕಷ್ಟವಾಗುತ್ತಿದೆ ಎಂದು ಜನರ ಸಮಸ್ಯೆಗಳನ್ನು ತೆರೆದಿಡುವ ಪ್ರಯತ್ನ ಮಾಡಿದರು ವಿದ್ಯಾರ್ಥಿ ಸಂಘಟನೆ ಸದಸ್ಯರು.


ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ವಿನಯ್ ರಾಜವತ್, ರಸ್ತೆಯಲ್ಲಿ ಪ್ರತಿದಿನ ಓಡಾಡುವವರಿಗೆ ಕಷ್ಟವಾಗುತ್ತಿದೆ. ಅದು ಯಾವುದೇ ಪಕ್ಷದವರಾಗಿರಬಹುದು, ಎಲ್ಲರೂ ಯುವಜನತೆಯ ಬಾಳನ್ನು ಹಾಳುಮಾಡಿದ್ದಾರೆ. ಶಿವಮೊಗ್ಗದ ಸಮಸ್ಯೆ ಬಗ್ಗೆ ನನ್ನ ರಕ್ತದಲ್ಲಿ ಪತ್ರ ಬರೆದು ಕಳುಹಿಸಿದ್ದೇನೆ ಎಂದರು.


ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ವಿದ್ಯಾರ್ಥಿಯೊಬ್ಬ, ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಭಿವೃದ್ಧಿ ಕೆಲಸಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಅವರಿಗೆ ಆಡಳಿತದಲ್ಲಿ ಅಷ್ಟೊಂದು ನೈಪುಣ್ಯತೆಯಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com