ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸ್ಫೋಟ: ಇಬ್ಬರು ಅಧಿಕಾರಿಗಳು ಅಮಾನತು

ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಅಧಿಕಾರಿಗಳನ್ನು ಕರ್ತವ್ಯ ಲೋಪದ ಕಾರಣ ಅಮಾನತುಗೊಳಿಸಲಾಗಿದೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.
ಕೇಂದ್ರ ಸಚಿವ ಸುರೇಶ್ ಅಂಗಡಿ
ಕೇಂದ್ರ ಸಚಿವ ಸುರೇಶ್ ಅಂಗಡಿ

ಹುಬ್ಬಳ್ಳಿ:  ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಅಧಿಕಾರಿಗಳನ್ನು ಕರ್ತವ್ಯ ಲೋಪದ ಕಾರಣ ಅಮಾನತುಗೊಳಿಸಲಾಗಿದೆ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.

ಸೋಮವಾರ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಸ್ಟೇಷನ್ ಮಾಸ್ಟರ್ ಎಸ್ ಎಂ ವರುಣ್ ಕುಮಾರ್, ತ್ವರಿತ ಕಾರ್ಯಪಡೆಯ ಎಎಸ್ಐ ಮಂಜುನಾಥ್  ಅವರನ್ನು ಅಮಾನತುಗೊಳಿಸಲಾಗಿದೆ ಎಂದರು.

ಮೂರು ದಿನಗಳಲ್ಲಿ  ತನಿಖೆ ಮುಕ್ತಾಯಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದು, ಈ ವೇಳೆಗೆ ಸಂಪೂರ್ಣ ವರದಿ ಬರಲಿದೆ. ರೈಲ್ವೆ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ ಒದಗಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು.

ವಿಮಾನ ನಿಲ್ದಾಣದಲ್ಲಿರುವ ಮಾದರಿಯಂತೆ ರೈಲ್ವೆ ನಿಲ್ದಾಣದಲ್ಲಿಯೂ ಸ್ಕ್ಯಾನಿಂಗ್ ಯಂತ್ರಗಳನ್ನು ಅಳವಡಿಸಲಾಗುವುದು. ನಿಲ್ದಾಣದಲ್ಲಿ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅಂತವರ ಮೇಲೆ ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com