ಶಿವಮೊಗ್ಗ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ವಸತಿ ಶಾಲೆ ಶಿಕ್ಷಕ ಅರೆಸ್ಟ್

ಶಿವಮೊಗ್ಗ ಜಿಲ್ಲೆಯಸಾಗರ ತಾಲೂಕಿನ ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ವಸತಿ ಶಾಲೆಯ ಶಿಕ್ಷಕನೊಬ್ಬನನ್ನು ಬಂಧಿಸಿರುವ ಪ್ರಕರಣ ವರದಿಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಸಾಗರ ತಾಲೂಕಿನ ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ವಸತಿ ಶಾಲೆಯ ಶಿಕ್ಷಕನೊಬ್ಬನನ್ನು ಬಂಧಿಸಿರುವ ಪ್ರಕರಣ ವರದಿಯಾಗಿದೆ.

ವಿದ್ಯಾರ್ಥಿನಿಗೆ ಕಳೆದೊಂದು ತಿಂಗಳಿನಿಂದ ಡ್ರಾಯಿಂಗ್ (ಚಿತ್ರಕಲೆ) ಕಲಿಸುವ ಸೋಗಿನಲ್ಲಿ ಚನ್ನಕೇಶವ ಎಂದು ಗುರುತಿಸಲ್ಪಟ್ಟ  ಆರೋಪಿ ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದನೆಂದು ಆರೋಪಿಸಲಾಗಿದೆ.

ಈ ಸಂಬಂಧ ಬಾಲಕಿ ಶಾಲಾ ಅಧಿಕಾರಿಗಳಿಗೆ ದೂರು ನೀಡಿದ್ದಾಳೆ. ಆದರೆ, ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಶಾಲೆ ವಿಫಲವಾದ ಹಿನ್ನೆಲೆಯಲ್ಲಿ ಲಕಿಯ ಪೋಷಕರು ಶಿಕ್ಷಕರ ವಿರುದ್ಧ ಶುಕ್ರವಾರ ಪೊಲೀಸ್ ದೂರು ದಾಖಲಿಸಿದ್ದಾರೆ. ಸಾಗರ ತಾಲೂಕು ಗ್ರಾಮೀಣ ಪೊಲೀಸರಲ್ಲಿ ದೂರು ಸಲ್ಲಿಸಿದ್ದಾರೆ.  ಇದೀಗ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com