ದೀಪಾವಳಿಯಂದು ಟಿಪ್ಪು ಬಗ್ಗೆ ಡಿಸಿಎಂ ಅಶ್ವತ್ಥ ನಾರಾಯಣ ಪೋಸ್ಟ್ ಹಾಕಿದ್ದೇಕೆ?

ನಾಡಿನೆಲ್ಲೆಡೆ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ, ಇದೇ ವೇಳೆ  ಡಿಸಿಎಂ ಅಶ್ವತ್ಥ್ ನಾರಾಯಣ್ ಟಿಪ್ಪು ವಿರುದ್ಧ ಕಿಡಿ ಕಾರಿದ್ದು, 260 ವರ್ಷಗಳ ಹಿಂದೆ ನಡೆದಿದ್ದ ಘಟನೆಯನ್ನ ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಪ್ರಸ್ತಾಪಿಸಿದ್ದಾರೆ.

Published: 28th October 2019 10:04 AM  |   Last Updated: 28th October 2019 10:04 AM   |  A+A-


Ashwath Narayana

ಅಶ್ವತ್ಥ ನಾರಾಯಣ

Posted By : Shilpa D
Source : Online Desk

ಬೆಂಗಳೂರು: ನಾಡಿನೆಲ್ಲೆಡೆ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ, ಇದೇ ವೇಳೆ  ಡಿಸಿಎಂ ಅಶ್ವತ್ಥ್ ನಾರಾಯಣ್ ಟಿಪ್ಪು ವಿರುದ್ಧ ಕಿಡಿ ಕಾರಿದ್ದು, 260 ವರ್ಷಗಳ ಹಿಂದೆ ನಡೆದಿದ್ದ ಘಟನೆಯನ್ನ ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಪ್ರಸ್ತಾಪಿಸಿದ್ದಾರೆ.

2 ಶತಮಾನಗಳ ಹಿಂದೆ ಇದೇ ನರಕ ಚತುರ್ದಶಿಯ ದಿನ, ಮತಾಂಧ ಟಿಪ್ಪು ಸುಲ್ತಾನನ ಕ್ರೌರ್ಯ , ಅಟ್ಟಹಾಸಕ್ಕೆ ಅಸಹಾಯಕ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 800 ಮುಗ್ಧ ಜನರು ಬಲಿಯಾದರು. ದೇಶದೆಲ್ಲೆಡೆ ಈ ಬೆಳಕಿನ ಹಬ್ಬವನ್ನು ಆಚರಿಸುತ್ತಿದ್ದರೆ, ನಮ್ಮ ರಾಜ್ಯದ ಮೇಲುಕೋಟೆಯಲ್ಲಿ ದೀಪಾವಳಿಯ ಸಂಭ್ರಮವಿಲ್ಲದೇ ಕತ್ತಲು ಆವರಿಸುತ್ತಿರುತ್ತದೆ.

ಈ ಹೃದಯವಿದ್ರಾವಕ ಘಟನೆಯು ಇತಿಹಾಸದ ಪುಟಗಳಿಗೆ ಮಾತ್ರ ಸೀಮಿತವಾಗಬಾರದು, ನಮ್ಮ ಸಾಮೂಹಿಕ ನೆನಪಿನಿಂದ ಮಾಸಬಾರದು. ಮೇಲುಕೋಟೆ ಹತ್ಯಾಕಾಂಡದ ಹುತಾತ್ಮರನ್ನು ಇಂದು ನಾವೆಲ್ಲರೂ ನೆನೆಯೋಣ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಪೋಸ್ಟ್ ಅನ್ನು ಹಲವರು ಬೆಂಬಲಿಸಿದ್ದಾರೆ

Stay up to date on all the latest ರಾಜ್ಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp