ಇತಿಹಾಸ ಪಠ್ಯದಿಂದ 'ಟಿಪ್ಪು ಡ್ರಾಪ್':  ಮಾಧ್ಯಮ ಸಂವಾದದಲ್ಲಿ ಯಡಿಯೂರಪ್ಪ

ಟಿಪ್ಪು ಸುಲ್ತಾನ್ ಇತಿಹಾಸವನ್ನು ಪಠ್ಯದಿಂದಲೇ ತೆಗೆದುಹಾಕುತ್ತೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ  ನಡೆದ ಮಾಧ್ಯಮ ಸಂವಾದದಲ್ಲಿ ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ.

Published: 30th October 2019 01:23 PM  |   Last Updated: 30th October 2019 01:23 PM   |  A+A-


Tipu sultan

ಟಿಪ್ಪು ಸುಲ್ತಾನ್

Posted By : Shilpa D
Source : Online Desk

ಬೆಂಗಳೂರು: ಟಿಪ್ಪು ಸುಲ್ತಾನ್ ಇತಿಹಾಸವನ್ನು ಪಠ್ಯದಿಂದಲೇ ತೆಗೆದುಹಾಕುತ್ತೇವೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ  ನಡೆದ ಮಾಧ್ಯಮ ಸಂವಾದದಲ್ಲಿ ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಟಿಪ್ಪು ಜಯಂತಿ ಆಚರಣೆ ಜಾರಿಗೆ ಬಂದಿತ್ತು. ಟಿಪ್ಪು ಜಯಂತಿಗೆ ಬಿಜೆಪಿ ಹಾಗೂ ಸಂಘಪರಿವಾರ ವ್ಯಾಪಕವಾಗಿ ವಿರೋಧ ವ್ಯಕ್ತಪಡಿಸಿತ್ತು. ಟಿಪ್ಪು ಜಯಂತಿ ವಿವಾದಕ್ಕೆ ಅಮಾಯಕ ಜೀವಗಳು ಬಲಿಯಾಗಿದ್ದವು. ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮತೀಯ ಸಂಘರ್ಷಕ್ಕೂ ಟಿಪ್ಪು ಜಯಂತಿ ಕಾರಣವಾಗಿತ್ತು.  ಹೀಗಾಗಿ ಟಿಪ್ಪು ಜಂಯತಿ ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಆಡಳಿತಕ್ಕೆ ಬಂದ ತಕ್ಷಣ ಟಿಪ್ಪು ಜಯಂತಿ ಆಚರಣೆಗೆ ಬ್ರೇಕ್ ಹಾಕಿತ್ತು. ಸರ್ಕಾರದ ಈ ನಡೆಯನ್ನು ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಟೀಕಿಸಿದ್ದವು. ಇದೀಗ ಪಠ್ಯಪುಸ್ತಕದಿಂದ ಟಿಪ್ಪು ಇತಿಹಾಸದ ಪಠ್ಯವನ್ನು ತೆಗೆದುಹಾಕುವ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಟಿಪ್ಪು ಸುಲ್ತಾನ್ ವಿಚಾರ ಪಠ್ಯ ಪುಸ್ತಕದಲ್ಲಿರಲು ಬಿಡುವುದಿಲ್ಲ. ಟಿಪ್ಪು ಇತಿಹಾಸವನ್ನು ಪಠ್ಯದಿಂದ ತೆಗೆದು ಹಾಕುವ ಕುರಿತಾಗಿ ಪರಿಶೀಲನೆ ನಡೆಸಲಾಗುವುದು ಎಂದು ಬುಧವಾರ ನಡೆದ ಮಾಧ್ಯಮ ಸಂವಾದದಲ್ಲಿ ಸಿಎಂ ಹೇಳಿದ್ದಾರೆ. 

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp