ಪಿಎಸ್‌ಐ ಪ್ರಶ್ನೆ ಪತ್ರಿಕೆ ಸೋರಿಕೆ: ಭದ್ರತಾ ಸಿಬ್ಬಂದಿ ಬಂಧನ

ಪಿಎಸ್‌ಐ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಮಣಿಪಾಲ್ ಪ್ರಿಂಟಿಂಗ್ ಪ್ರೆಸ್‌ನ ಮುಖ್ಯ ಭದ್ರತಾ ಸಿಬ್ಬಂದಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪಿಎಸ್‌ಐ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಮಣಿಪಾಲ್ ಪ್ರಿಂಟಿಂಗ್ ಪ್ರೆಸ್‌ನ ಮುಖ್ಯ ಭದ್ರತಾ ಸಿಬ್ಬಂದಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಣಿಪಾಲ್ ಪ್ರಿಂಟಿಂಗ್ ಪ್ರೆಸ್‌ನ ಮುಖ್ಯ ಭದ್ರತಾ ಸಿಬ್ಬಂದಿ ಅನಿಲ್ ಫ್ರಾನ್ಸಿಸ್ ಬಂಧಿತ ಆರೋಪಿ.

ದುಬೈನಲ್ಲಿ ತಲೆಮರೆಸಿಕೊಂಡಿದ್ದ ಫ್ರಾನ್ಸಿಸ್ ನನ್ನು ಸಿಸಿಬಿ ಪೊಲೀಸರು ಉಪಾಯದಿಂದ ಕರೆಸಿ ಬಂಧಿಸಿದ್ದಾರೆ. 

ಮಡಿಕೇರಿಯಲ್ಲಿ ಉಂಟಾಗಿದ್ದ ನೆರೆ ಪರಿಸ್ಥಿತಿ ವೇಳೆ ಪಿಎಸ್‌ಐ ಪರೀಕ್ಷೆಯನ್ನು ಸರ್ಕಾರ ಮುಂದೂಡಿತ್ತು. ಈ ವೇಳೆಗಾಗಲೇ ಪ್ರಶ್ನೆ ಪತ್ರಿಕೆ ಸಿದ್ಧವಿರುವ ವಿಚಾರ ತಿಳಿದಿದ್ದ ಮುಖ್ಯ ಭದ್ರತಾ ಸಿಬ್ಬಂದಿ ಅನಿಲ್ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತಡರಾತ್ರಿ ಎರಡು ಗಂಟೆ ಹೊತ್ತಿಗೆ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿ ಪ್ರಶ್ನೆ ಪತ್ರಿಕೆ ಕದ್ದು, ಅಲ್ಲಿಯೇ ಜೆರಾಕ್ಸ್ ಮಾಡಿ ಅಸಲಿ ಪೇಪರ್‌ನ ಅಲ್ಲೇ ಇಟ್ಟು ಬಂದಿದ್ದನು. ನಂತರ ಟಿಪನ್ ಬಾಕ್ಸ್‌ನಲ್ಲಿ ಬಚ್ಚಿಟ್ಟುಕೊಂಡು ಅಲ್ಲಿಂದ ಪೇಪರ್ ಹೊರತಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪಿಎಸ್ ಐ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಫ್ರಾನ್ಸಿಸ್ ಸೇರಿದಂತೆ 119 ಆರೋಪಿಗಳ ವಿರುದ್ಧ 2 ಸಾವಿರ ಪುಟಗಳ ಚಾರ್ಜ್ ಶೀಟ್ ಅನ್ನು ಸಿಸಿಬಿ ಪೊಲೀಸರು ಸಿದ್ಧಪಡಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com