ದೂರವಾಣಿ ಕದ್ದಾಲಿಕೆ ಪ್ರಕರಣ: ಸಿಬಿಐನಿಂದ ಎಫ್ ಐಆರ್ ದಾಖಲು, ತನಿಖೆ ಶುರು

ದೂರವಾಣಿ ಕದ್ದಾಲಿಕೆ ಪ್ರಕರಣದ ತನಿಖೆ ವಹಿಸಿಕೊಂಡಿರುವ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐ, ಎಫ್ ಐಆರ್ ದಾಖಲಿಸಿಕೊಂಡಿದ್ದು, ತನಿಖಾ ಕಾರ್ಯ ಆರಂಭಿಸಿದೆ
ಸಿಬಿಐ
ಸಿಬಿಐ

ಬೆಂಗಳೂರು: ದೂರವಾಣಿ ಕದ್ದಾಲಿಕೆ ಪ್ರಕರಣದ ತನಿಖೆ ವಹಿಸಿಕೊಂಡಿರುವ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐ, ಎಫ್ ಐಆರ್ ದಾಖಲಿಸಿಕೊಂಡಿದ್ದು, ತನಿಖಾ ಕಾರ್ಯ ಆರಂಭಿಸಿದೆ


ಆಡಳಿತಾರೂಢ ಹಾಗೂ ವಿರೋಧ ಪಕ್ಷಗಳ ಕೆಲವು ನಾಯಕರು , ಶಾಸಕರು ಹಾಗೂ ನಿಕಟವರ್ತಿಗಳ ದೂರವಾಣಿಗಳನ್ನು ಅಕ್ರಮವಾಗಿ ಕದ್ದಾಲಿಕೆ ನಡೆಸಲಾಗಿದೆ ಎಂದು ಕೆಲ ಅಪರಿಚಿತ ವ್ಯಕ್ತಿಗಳ ಮೇಲೆ ದೂರು ದಾಖಲಿಸಿಕೊಂಡಿದೆ.

ಜೆಡಿಎಸ್ - ಬಿಜೆಪಿ ಮೈತ್ರಿಕೂಟದ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ದೂರವಾಣಿ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ವಹಿಸಿ ಇತ್ತೀಚಿಗೆ ಅಧಿಸೂಚನೆ ಹೊರಡಿಸಿತ್ತು. ರಾಜ್ಯಸರ್ಕಾರದ ಕೋರಿಕೆ ಮೇರೆಗೆ ತನಿಖೆ ನಡೆಸಲು ಮುಂದಾಗಿರುವ ಸಿಬಿಐ ದೂರು ದಾಖಲಿಸಿಕೊಂಡಿದೆ.


ಜೆಡಿಎಸ್ -ಕಾಂಗ್ರೆಸ್ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ದೂರವಾಣಿ ಕದ್ದಾಲಿಕೆ ನಡೆದಿತ್ತು. ಇದರಲ್ಲಿ ಆಡಳಿತ ಪಕ್ಷದ ಕೆಲ ಮುಖಂಡರು, ವಿರೋಧ ಪಕ್ಷಗಳ ಮುಖಂಡರು, ರಾಜೀನಾಮೆ ನೀಡಿದ ಶಾಸಕರು, ಸರ್ಕಾರಿ ಅಧಿಕಾರಿಗಳು , ಪೊಲೀಸ್ ಅಧಿಕಾರಿಗಳ ದೂರವಾಣಿಗಳನ್ನು ಕದ್ದಾಲಿಸಲಾಗಿತ್ತು ಎಂಬ ಆರೋಪಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com