ಐದು ಮರಿಗಳ ಜನನ
ಐದು ಮರಿಗಳ ಜನನ

ಪಿಲಿಕುಳ: ಐದು ಮರಿಗಳ ಜನನ, ಹುಲಿ ಸಂತತಿ ಪಟ್ಟಿಯಲ್ಲಿ ಮತ್ತೆ ಅಗ್ರ ಸ್ಥಾನಕ್ಕೇರಿದ ಕರ್ನಾಟಕ

ಪಿಲಿಕುಳ ಜೈವಿಕ ಉದ್ಯಾನದಲ್ಲಿ ರಾಣಿ ಎಂಬ ಹುಲಿ ಐದು ಮರಿಗಳಿಗೆ ಜನ್ಮ ನೀಡಿದ್ದು, ಹುಲಿ ಸಂತತಿ ಪಟ್ಟಿಯಲ್ಲಿ ಮತ್ತೆ ಕರ್ನಾಟಕ ಅಗ್ರಸ್ಥಾನಕ್ಕೇರಿದೆ.

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನದಲ್ಲಿ ರಾಣಿ ಎಂಬ ಹುಲಿ ಐದು ಮರಿಗಳಿಗೆ ಜನ್ಮ ನೀಡಿದ್ದು, ಹುಲಿ ಸಂತತಿ ಪಟ್ಟಿಯಲ್ಲಿ ಮತ್ತೆ ಕರ್ನಾಟಕ ಅಗ್ರಸ್ಥಾನಕ್ಕೇರಿದೆ.

ಮಂಗಳೂರಿನ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದಲ್ಲಿ 'ರಾಣಿ' ಎಂಬ ಹೆಣ್ಣು ಹುಲಿ 5 ಮರಿಗಳಿಗೆ ಜನ್ಮ ನೀಡಿದೆ. 8 ವರ್ಷದ ರಾಯಲ್ ಬೆಂಗಾಲಿ ಟೈಗರ್ ರಾಣಿ ಮೂರು ವಾರಗಳ ಹಿಂದಯೇ ಜನ್ಮ ನೀಡಿರುವ ಮರಿಗಳ ಪೈಕಿ 3 ಹೆಣ್ಣು ಹಾಗೂ 2 ಗಂಡು ಆಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಂತೆಯೇ ಈ ಐದು ಮರಿಗಳು ಆರೋಗ್ಯದಿಂದಿವೆ ಎಂದು ಪ್ರಾಣಿಸಂಗ್ರಹಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದ ಹುಲಿಗಳ ಗಣತಿಯಲ್ಲಿ 2ನೇ ಸ್ಥಾನಕ್ಕೆ ಕುಸಿದಿದ್ದ ಕರ್ನಾಟಕ, ಇಂದಿನ ಐದು ಮರಿಗಳ ಜನನದ ಮೂಲಕ ಕರ್ನಾಟಕ ಕೇವಲ 15 ದಿನಗಳ ಅಂತರದಲ್ಲಿ ಮತ್ತೆ ಅಗ್ರ ಸ್ಥಾನಕ್ಕೇರಿದೆ.

ವಿಶ್ವ ಹುಲಿ ದಿನವಾದ ಜುಲೈ 29ರಂದು ಕೇಂದ್ರ ಸರ್ಕಾರವು ಬಿಡುಗಡೆ ಮಾಡಿದ್ದ ಹುಲಿಗಳ ಗಣತಿಯಲ್ಲಿ 526 ಹುಲಿಗಳನ್ನು ಹೊಂದಿದ್ದ ಮಧ್ಯಪ್ರದೇಶವು ಅಗ್ರ ಸ್ಥಾನಕ್ಕೆ ಏರಿತ್ತು. ಹೀಗಾಗಿ 524 ಹುಲಿಗಳನ್ನು ಹೊಂದಿದ್ದ ಕರ್ನಾಟಕ ಅಗ್ರಸ್ಥಾನದಿಂದ 2ನೇ ಸ್ಥಾನಕ್ಕೆ ಕುಸಿದಿತ್ತು. ಆದರೆ ಈಗ ಕರ್ನಾಟಕದ ಹುಲಿಗಳ ಸಂಖ್ಯೆ 5 ಮರಿಗಳ ಸೇರಿ 529 ಆಗಿದೆ. ಈ ಮೂಲಕ ಕರ್ನಾಟಕ ಮತ್ತೆ ಅಗ್ರಸ್ಥಾನಕ್ಕೆ ಏರಿಕೆಯಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com