ಫಡ್ನವೀಸ್ ಭೇಟಿಗೆ ಹೊರಟ ಯಡಿಯೂರಪ್ಪ: ಮಹದಾಯಿ, ಕೃಷ್ಣ ಮೇಲ್ದಂಡೆ ಯೋಜನೆಗಳು ಕುರಿತು ಚರ್ಚೆ 

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆಹ್ವಾನದ ಮೇರೆಗೆ ವಾಣಿಜ್ಯ ನಗರಿ ಮುಂಬೈಗೆ ತೆರಳುತ್ತಿದ್ದೇನೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.
ಸಿಎಂ ಯಡಿಯೂರಪ್ಪ (ಸಂಗ್ರಹ ಚಿತ್ರ)
ಸಿಎಂ ಯಡಿಯೂರಪ್ಪ (ಸಂಗ್ರಹ ಚಿತ್ರ)

ಬೆಂಗಳೂರು: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆಹ್ವಾನದ ಮೇರೆಗೆ ವಾಣಿಜ್ಯ ನಗರಿ ಮುಂಬೈಗೆ ತೆರಳುತ್ತಿದ್ದೇನೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ. 

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು ದೇವೇಂದ್ರ ಫಡ್ನವೀಸ್ ಅವರ ಆಹ್ವಾನದ ಮೇರೆಗೆ ಮುಂಬೈಗೆ ತೆರಳುತ್ತಿದ್ದೇನೆ. ಭೇಟಿ ವೇಳೆ ಫಡ್ನವೀಸ್ ಅವರೊಂದಿಗೆ ಮಹಾದಾಯಿ ನೀರಾವರಿ ಯೋಜನೆ, ಕೃಷ್ಣಾ ಮೇಲ್ದಂಡೆ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ. 

ಎರಡೂ ನೀರಾವರಿ ಯೋಜನೆಗಳ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಸೆ.6 ರಂದು ಸಚಿವ ಸಂಪುಟದ ಸಭೆ ಕರೆಯಲಾಗಿದೆ. ಈ ವೇಳೆ ಕೆಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತದೆ. ಸೆಪ್ಟೆಂಬರ್ 7 ರಂದು ಪ್ರಧಾನಮಂತ್ರಿಗಳು ರಾಜ್ಯಕ್ಕೆ ಆಗಮಿಸಲಿದ್ದಾರೆ. ಈ ವೇಳೆ ಪ್ರವಾಹದಿಂದ ಆಗಿರುವ ನಷ್ಟ ಹಾಗೂ ಅನಾಹುತಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. 

ಪ್ರಧಾನಿ ಮೋದಿ ಭೇಟಿ ವೇಳೆ ರಾಜ್ಯ ಸರ್ಕಾರ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕೈಗೊಂಡ ಕ್ರಮಗಳ ಬಗ್ಗೆ ಅವರಿಗೆ ವಿವರ ನೀಡಲಾಗುತ್ತದೆ. ಕೇಂದ್ರ ಸರ್ಕಾರದಿಂದ ಹೆಚ್ಚಿನ ಪರಿಹಾರ ಘೋಷಿಸಲು ಮನವಿ ಮಾಡಲಾಗುತ್ತದೆ. ರಾಜ್ಯಕ್ಕೆ ಹೆಚ್ಚಿನ ನೆರವು ದೊರಕುವ ವಿಶ್ವಾಸವಿದೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com