ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ನದಿ ತೀರ ಗ್ರಾಮಗಳಲ್ಲಿ ಮತ್ತೊಮ್ಮೆ ಪ್ರವಾಹ ಭೀತಿ

ಮಹಾರಾಷ್ಟ್ರದಲ್ಲಿ ಬೀಳುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದ ಒಳಹರಿವು ಬಂದ ನಂತರ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರದ ಬಸವಾಸಗರ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಯಾದಗರಿ: ಮಹಾರಾಷ್ಟ್ರದಲ್ಲಿ ಬೀಳುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದ ಒಳಹರಿವು ಬಂದ ನಂತರ ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರದ ಬಸವಾಸಗರ ಜಲಾಶಯದಿಂದ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗಿದೆ.

ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತಿ (ಕೆಬಿಜೆಎನ್ಎಲ್) ಮೂಲಗಳ ಪ್ರಕಾರ ಮಂಗಳವಾರ 34,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದ್ದು, ಅದೇ ಪ್ರಮಾಣದ ನೀರು ಜಲಾಶಯಕ್ಕೆ ಬರುತ್ತಿದೆ. ಸುರಕ್ಷತಾ ಮಟ್ಟವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು 5 ಗೇಟ್‌ಗಳನ್ನು ತೆರೆದಿದ್ದಾರೆ. ಜಲಾಶಯದಲ್ಲಿ ಸದ್ಯ, ನೀರಿನ ಮಟ್ಟ 1615 ಅಡಿ ಇದೆ.

ಇದರ ಬೆನ್ನಲ್ಲೇ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ನದಿ ತೀರ ಗ್ರಾಮಗಳಲ್ಲಿ ಪ್ರವಾಹ ಭೀತಿ ಮತ್ತೊಮ್ಮೆ ಹೆಚ್ಚಾಗಿದೆ. ಈ ಮಧ್ಯೆ, ಮುಂದಿನ ನಾಲ್ಕೈದು ದಿನಗಳಲ್ಲಿ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರಿ ಮತ್ತು ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೋಮವಾರ ರಾತ್ರಿಯಿಂದಲೂ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಒಳಹರಿವು 26,158 ಕ್ಯೂಸೆಕ್ ದಾಖಲಾಗಿದ್ದು, ಅದೇ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಕೆಬಿಜೆಎನ್ಎಲ್ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com