ಡಿಕೆಶಿ ಬಂಧನ ಹಿನ್ನೆಲೆಯಲ್ಲಿ ಪ್ರಕ್ಷುಬ್ಧ: ರಾಮನಗರ ಶಾಲಾ-ಕಾಲೇಜುಗಳಿಗೆ ರಜೆ, ಹಲವು ನಾಯಕರ ಮನೆಗಳಿಗೆ ಭದ್ರತೆ

ಮಾಜಿ ಸಚಿವ ಡಿ ಕೆ ಶಿವಕುಮಾರ್‌ ಅವರನ್ನು ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ರಾಮನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ
ಡಿಕೆಶಿ ಬಂಧನ ವಿರೋಧಿಸಿ ಪ್ರತಿಭಟನೆ
ಡಿಕೆಶಿ ಬಂಧನ ವಿರೋಧಿಸಿ ಪ್ರತಿಭಟನೆ

ರಾಮನಗರ: ಮಾಜಿ ಸಚಿವ ಡಿ ಕೆ ಶಿವಕುಮಾರ್‌ ಅವರನ್ನು ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ರಾಮನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ರಾಮನಗರ ಜಿಲ್ಲಾಧಿಕಾರಿ ಎಂ ಎಸ್‌ ಅರ್ಚನಾ ಎಲ್ಲಾ ಸರಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಡಿಕೆಶಿ ಅವರ ಬಂಧನದ ಹಿನ್ನಲೆಯಲ್ಲಿ ರಾಮನಗರ ಮತ್ತು ಜಿಲ್ಲೆಯ ಕನಕಪುರದಲ್ಲಿ ಬಿಗುವಿನ ವಾತಾವರಣವಿದೆ. ಬಂಧನ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಅಲ್ಲಲ್ಲಿ ಟೈರ್‌ ಗಳಿಗೆ ಬೆಂಕಿ ಹಚ್ಚಿದ ಪ್ರಕರಣವೂ ಬೆಳಕಿಗೆ ಬಂದಿದೆ.

ರಾಮನಗರ ಬಂದ್ ಗೆ ಕರೆ ನೀಡಿರುವ ಡಿಕೆಶಿ ಬೆಂಬಲಿಗರು ಹೆದ್ದಾರಿ ಬಂದ್ ಮಾಡಿ, ಕನಕಪುರ – ಮೈಸೂರು ಹೆದ್ದಾರಿಯಲ್ಲಿ ಟೈರ್‌ ಗಳಿಗೆ ಬೆಂಕಿ ಹಚ್ಚಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.ಹಲವು ಬಸ್ ಗಳಿಗೆ ಹಾನಿ ಮಾಡಲಾಗಿದೆ, ಈ ಸಂಬಂಧ ಕನಕಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ನವದೆಹಲಿಯಲ್ಲಿ ಡಿಕೆ ಶಿವಕುಮಾರ್ ಬಂಧಿಸಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಬಹುದು ಎಂಬ ಹಿನ್ನೆಲೆಯಲ್ಲಿ  ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಶಾಸಕ ಯೋಗೇಶ್ವರ್ ಅವರ ಚನ್ನಪಟ್ಟಣದ ಕುವೆಂಪುನಗರ ನಿವಾಸಕ್ಕೂ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ರಾಮನಗರದ ಐಜೂರು ವೃತ್ತದಲ್ಲಿ ಭದ್ರತೆ ದೃಷ್ಠಿಯಿಂದ ಎರಡು ಕೆಎಸ್‌ ಆರ್‌ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com