ಡಿ.ಕೆ. ಶಿವಕುಮಾರ್ ಬಂಧನ: ರಾಮನಗರದಲ್ಲಿ ಜನಜೀವನ ಅಸ್ತವ್ಯಸ್ತ

ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರ ಬಂಧನ ವಿರೋಧಿಸಿ ಗುರುವಾರ ಕೂಡಾ ರಾಮನಗರ ಜಿಲ್ಲೆಯಲ್ಲಿ ಬಂದ್ ಆಚರಿಸಲಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರ ಬಂಧನ ವಿರೋಧಿಸಿ ಗುರುವಾರ ಕೂಡಾ ರಾಮನಗರ ಜಿಲ್ಲೆಯಲ್ಲಿ ಬಂದ್ ಆಚರಿಸಲಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. 

ಬಂದ್ ಕರೆ ಹಿನ್ನೆಲೆಯಲ್ಲಿ ಯಾವುದೇ ಕೆಎಸ್ಆರ್'ಟಿಸಿ ಬಸ್, ಸಾರ್ಜಜನಿಕ ಸೇವಾ ವಾಹನಗಳು ರಸ್ತೆಗಿಳಿದಿಲ್ಲ. ಮೈಸೂರು ಹಾಗೂ ಹೆದ್ದಾರಿಯಲ್ಲಿ ವಾಹನ ಸಂಚಾರ ವಿಳಂಬವಾಗಿದೆ. ಬಸ್ ಗಳು ರಸ್ತೆಗಿಳಿಯದ ಕಾರಣ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಇದರಂತೆ ಚನ್ನಪಟ್ಟಣದಲ್ಲೂ ಬಂದ್ ವಾತಾವರಣ ಮುಂದುವರೆದಿದೆ. ಸ್ಥಳೀಯ ನಾಯಕರು ಬಂದ್'ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. 

ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ರಸ್ತೆಗಳನ್ನು ತಡೆಹಿಡಿದಿದ್ದು, ಹಲವೆಡೆ ಪ್ರತಿಭಟನೆಗಳು ಮುಂದುವರೆದಿವೆ. 

ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದೂ, ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಹೆದ್ದಾರಿ ತಡೆ: 20 ಡಿಕೆ.ಶಿವಕುಮಾರ್ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು
ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆದಿದ್ದ ಆರೋಪದ ಮೇರೆಗೆ ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್ ಸೇರಿ 20 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಚಿಕ್ಕಬಳ್ಳಾಪುರ ತಾಲೂಕು ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಡಿಕೆಶಿ ಬಂಧನ ವಿರೋಧಿಗಿ ಮಂಗಳವಾರ ಮಧ್ಯರಾತ್ರಿ ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್ ಸೇರಿದಂತೆ ಯುವ ಕಾಂಗ್ರೆಸ್ ಮುಖಂಡರಾದ ಅರುಣ್ ಕೊಳವನಹಳ್ಳಿ, ಶೆಟ್ಟಿಗೆರೆ ಮುರುಳಿ, ಚಿಕ್ಕಬಳ್ಳಾಪುರ ನಗರದ ನಿವಾಸಿಗಳಾದ ಷಾಹೀದ್, ಬಾಬಾಜಾನ್, ಸುರೇಶ್, ವಿನಯ್ ರಾಜಶೇಖರ್ ಹಾಗೂ ಮಹಮದ್ ಮತ್ತಿತರರು ನಗರದ ಹೊಸ ವಲಯದ ಚದಲುಪುರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ತಡೆ ಮಾಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com