ಮೂಡಾ ಡೀನೋಟಿಫಿಕೇಷನ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಸಮನ್ಸ್ ಜಾರಿ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ) ಜಮೀನಿನ ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ) ಜಮೀನಿನ ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ, ಸೆ. 23ರಂದು ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ.

ಪ್ರಕರಣ ಸಂಬಂಧ ಕಳೆದ ವರ್ಷ ಪೊಲೀಸರು ಸಲ್ಲಿಸಿದ್ದ 'ಬಿ ' ರಿಪೋರ್ಟ್ ಅನ್ನು ನ್ಯಾಯಾಲಯ ರದ್ದುಗೊಳಿಸಿದೆ.

ಮೈಸೂರಿನ ಎಂ.ಗಂಗರಾಜು ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಶೇಷ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ, ಪ್ರಕರಣ ಸಂಬಂಧ 11 ಜನರಿಗೆ ಸಮನ್ಸ್ ಜಾರಿ ಮಾಡಿದ್ದಾರೆ. 

ಪ್ರಕರಣದಲ್ಲಿ ಶಾಸಕ ಎ.ರಾಮದಾಸ್‌, ಬಿಜೆಪಿ ಮುಖಂಡ ಗೋ.ಮಧುಸೂಧನ, ಹಿರಿಯ ಐಎಎಸ್‌ ಅಧಿಕಾರಿಗಳಾದ ಅಜಯ್‌ ಸೇಠ್‌, ಅಮಿತಾ ಪ್ರಸಾದ್ ಮತ್ತು ಕೆಎಎಸ್ ಅಧಿಕಾರಿ ಎಸ್‌.ಮೂರ್ತಿ ಸೇರಿದಂತೆ ಒಟ್ಟು 11 ಜನರ ವಿರುದ್ಧ ಸಮನ್ಸ್‌ ಜಾರಿಗೊಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com