ಮನೆ ಮನೆಗೆ ಮದ್ಯ ಪೂರೈಕೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಅಬಕಾರಿ ಸಚಿವರ ಯುಟರ್ನ್

ಮನೆ ಮನೆಗೆ ಮದ್ಯ ಪೂರೈಕೆ ಮಾಡುವ ಯೋಜನೆಯ ಕುರಿತು ಅಬಕಾರಿ ಸಚಿವ ನಾಗೇಶ್ ಯು-ಟರ್ನ್ ಹೊಡೆದಿದ್ದಾರೆ. 
ಮನೆ ಮನೆಗೆ ಮದ್ಯ ಪೂರೈಕೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಅಬಕಾರಿ ಸಚಿವರ ಯುಟರ್ನ್
ಮನೆ ಮನೆಗೆ ಮದ್ಯ ಪೂರೈಕೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಅಬಕಾರಿ ಸಚಿವರ ಯುಟರ್ನ್

ಬೆಂಗಳೂರು: ಮನೆ ಮನೆಗೆ ಮದ್ಯ ಪೂರೈಕೆ ಮಾಡುವ ಯೋಜನೆಯ ಕುರಿತು ಅಬಕಾರಿ ಸಚಿವ ನಾಗೇಶ್ ಯು-ಟರ್ನ್ ಹೊಡೆದಿದ್ದಾರೆ. 

ಸೆ.05 ರಂದು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅಬಕಾರಿ ಸಚಿವ ನಾಗೇಶ್, ಮನೆ ಮನೆಗೆ ಮದ್ಯ ಪೂರೈಕೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದಿದ್ದಾರೆ. ಹೆಣ್ಣು ಮಕ್ಕಳಿಗೆ ನೋವು ತರುವ ಕೆಲಸ ಮಾಡೋದಿಲ್ಲ ಎಂದು ಸಚಿವರು ಹೇಳಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ನಾಗೇಶ್, ಮೊಬೈಲ್ ವೈನ್ ಶಾಪ್‍ಗಳನ್ನು ತೆರೆಯಲು ಸರ್ಕಾರ ಚಿಂತನೆ ಮಾಡಿದೆ.ಎಲ್ಲೆಲ್ಲಿ ವೈನ್ ಶಾಪ್‍ಗಳಿಲ್ಲ ಅಂತಹ ಪ್ರದೇಶಗಳಲ್ಲಿ ಸಂಚಾರಿ ವೈನ್ ಶಾಪ್‍ಗಳ ವ್ಯವಸ್ಥೆಗೆ ಕ್ರಮ  ಕೈಗೊಳ್ಳಲಾಗಿದೆ.ಇದರಿಂದ ಇಲಾಖೆಗೆ ಮತ್ತಷ್ಟು ಹೆಚ್ಚಿನ ಆದಾಯ ಬರುವ ನಿರೀಕ್ಷೆ ಸರ್ಕಾರದ್ದಾಗಿದೆ.ತಾಂಡಾಗಳಲ್ಲಿ  ಸಂಚಾರಿ ವೈನ್ ಶಾಪ್‍ಗಳ ವ್ಯವಸ್ಥೆ ಮಾಡಲು ಚಿಂತನೆ ಮಾಡಲಾಗಿದೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com