ಆಪರೇಷನ್ ಕಮಲ: ಬಿಜೆಪಿ ನಾಯಕರ ವಿರುದ್ಧ ಎಸಿಬಿಗೆ ಕಾಂಗ್ರೆಸ್ ದೂರು

ಆಪರೇಷನ್ ಕಮಲ ಕಾರ್ಯಾಚರಣೆ ನಡೆಸಿ, ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿರುವ ಬಿಜೆಪಿ ಮುಖಂಡರ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ರಾಜಾಜಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಭ್ರಷ್ಟಾಚಾರ ನಿಗ್ರಹ ದಳ-ಎಸಿಬಿ ಗೆ ದೂರು ಸಲ್ಲಿಸಲಾಗಿದೆ.
ಎಸಿಬಿ ಕಚೇರಿ( ಸಂಗ್ರಹ ಚಿತ್ರ)
ಎಸಿಬಿ ಕಚೇರಿ( ಸಂಗ್ರಹ ಚಿತ್ರ)

ಬೆಂಗಳೂರು: ಆಪರೇಷನ್ ಕಮಲ ಕಾರ್ಯಾಚರಣೆ ನಡೆಸಿ, ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿರುವ ಬಿಜೆಪಿ ಮುಖಂಡರ ವಿರುದ್ಧ ಸೂಕ್ತ ತನಿಖೆ ನಡೆಸುವಂತೆ ರಾಜಾಜಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಭ್ರಷ್ಟಾಚಾರ ನಿಗ್ರಹ ದಳ-ಎಸಿಬಿ ಗೆ ದೂರು ಸಲ್ಲಿಸಲಾಗಿದೆ.

ಉಪಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹಾಗೂ ಇತರೆ ಬಿಜೆಪಿ ನಾಯಕರ ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಅವರಿಗೆ 5 ಕೋಟಿ ರೂ. ಹಣವನ್ನು ಲಂಚದ ರೂಪದಲ್ಲಿ ನೀಡಿ ಪಕ್ಷಾಂತರ ಮಾಡುವಂತೆ ಒತ್ತಡ ಹೇರಿದ್ದಾರೆ. ಈ ಬಗ್ಗೆ ಜುಲೈ ತಿಂಗಳಲ್ಲಿ ನಡೆದ ಅಧಿವೇಶನದಲ್ಲಿ ಈ ಪ್ರಕರಣ ಬಹಿರಂಗವಾಗಿದ್ದು, ಎಲ್ಲಾ ಮಾಹಿತಿಗಳನ್ನು ಕಡತದಲ್ಲಿ ದಾಖಲು ಮಾಡುವಂತೆ ಅಂದಿನ ಸಭಾಧ್ಯಕ್ಷ ರಮೇಶ್ ಕುಮಾರ್ ಸೂಚಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.  

ಆಪರೇಷನ್ ಕಮಲದ ಪ್ರಕರಣ ರಾಜ್ಯವ್ಯಾಪಿ ಹರಡಿರುವುದರಿಂದ ಈ ಬಗ್ಗೆ ಎಸಿಬಿ ದೂರು ದಾಖಲಿಸಿಕೊಂಡು ಸತ್ಯಾಂಶ ಬಹಿರಂಗಪಡಿಸಿ ತಪ್ಪಿತಸ್ಥರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ  ಒತ್ತಾಯಿಸಲಾಗಿದೆ.
  
ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ದೂರು ದಾಖಲಿಸಿ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಂಕರ್ ಜಿ.ಗೌಡ ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com