ಬೆಂಗಳೂರಿಗೆ ಪ್ರಧಾನಿ ಮೋದಿ: ವಿದ್ಯಾರ್ಥಿಗಳ ಜತೆಗೂಡಿ ಇಸ್ರೋ ಸಾಧನೆ ವೀಕ್ಷಣೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ರಾಜಧಾನಿಗೆ ಆಗಮಿಸಲಿದ್ದು, 70 ವಿದ್ಯಾರ್ಥಿಗಳ ಜೊತೆ ಗೂಡಿ ಇಸ್ರೋ ನಡೆಸಿರುವ ಚಂದ್ರಯಾನ-2 ಸಾಧನೆಯನ್ನು ವೀಕ್ಷಣೆ ಮಾಡಲಿದ್ದಾರೆ. 
ಪ್ರಧಾನಮಂತ್ರಿ ನರೇಂದ್ರ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ರಾಜಧಾನಿಗೆ ಆಗಮಿಸಲಿದ್ದು, 70 ವಿದ್ಯಾರ್ಥಿಗಳ ಜೊತೆ ಗೂಡಿ ಇಸ್ರೋ ನಡೆಸಿರುವ ಚಂದ್ರಯಾನ-2 ಸಾಧನೆಯನ್ನು ವೀಕ್ಷಣೆ ಮಾಡಲಿದ್ದಾರೆ. 

ಚಂದ್ರಯಾನ-2 ನೌಕೆ ಚಂದಿರನ ಮೇಲೆ ಇಂದು ತಡರಾತ್ರಿ 1.30ರಿಂದ 2.30ರ ವೇಳೆಗೆ (ಶನಿವಾರ ನಸುಕಿನಲ್ಲಿ) ಪಾದಾರ್ಪಣೆ ಮಾಡಲಿದೆ. ಈ ಅಪರೂಪದ ಕ್ಷಣವನ್ನು ಇಡೀ ವಿಶ್ವವೇ ಎದಿರು ನೋಡುತ್ತಿದೆ. 

ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ರಾತ್ರಿ ನಗರಕ್ಕೆ ಆಗಮಿಸಲಿದ್ದು, ಪ್ರೌಢಶಾಲೆಗಳ 70 ವಿದ್ಯಾರ್ಥಿಗಳ ಜತೆಗೂಡಿ ನಗರದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ವಿಜ್ಞಾನಿಗಳ ಸಾಧನೆಯನ್ನು ವೀಕ್ಷಿಸಲಿದ್ದಾರೆ. ಟಿವಿ ವಾಹಿನಿಗಳಲ್ಲೂ ಈ ಕಾರ್ಯಕ್ರಮ ನೇರ ಪ್ರಸಾರಗೊಳ್ಳಲಿದೆ. 

ನಗರಕ್ಕೆ ಆಗಮಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿಗಳ ಕಚೇರಿಯ ಹಿರಿಯ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಲಿದ್ದು, ಈ ವೇಳೆ ಪ್ರವಾಹ ಹಾಗೂ ಪರಿಹಾರಗಳ ಕುರಿತಂತೆ ಚರ್ಚೆ ನಡೆಸಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com