ಸಂಚಾರ ನಿಯಮ ಉಲ್ಲಂಘನೆ: ಒಂದೇ ದಿನ ರೂ.30 ಲಕ್ಷ ರೂ. ದಂಡ ವಸೂಲು!

ಸಂಚಾರ ನಿಯಮ ಉಲ್ಲಂಘಟನೆ ಸಂಬಂಧಿಸಿದಂತೆ ದೊಡ್ಡ ಮೊತ್ತದ ಪರಿಷ್ಕೃತ ದಂಡ ಕುರಿತ ಅಧಿಸೂಚನೆ ಹೊರಬಿದ್ದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತಂದಿರುವ ಪೊಲೀಸರು ಒಂಜದೇ ದಿನದಲ್ಲಿ ಬರೋಬ್ಬರಿ ರೂ.30 ಲಕ್ಷ ದಂಡ ವಸೂಲಿ ಮಾಡಿದ್ದಾರೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಟನೆ ಸಂಬಂಧಿಸಿದಂತೆ ದೊಡ್ಡ ಮೊತ್ತದ ಪರಿಷ್ಕೃತ ದಂಡ ಕುರಿತ ಅಧಿಸೂಚನೆ ಹೊರಬಿದ್ದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತಂದಿರುವ ಪೊಲೀಸರು ಒಂಜದೇ ದಿನದಲ್ಲಿ ಬರೋಬ್ಬರಿ ರೂ.30 ಲಕ್ಷ ದಂಡ ವಸೂಲಿ ಮಾಡಿದ್ದಾರೆ.
 
ಮಂಗಳವಾರವಷ್ಟೇ ಅಧಿಸೂಚನೆ ಹೊರಬಿದ್ದ ಬಳಿಕ ಬುಧವಾರದಿಂದಲೇ ಬೆಂಗಳೂರಿನಲ್ಲಿ ದಂಡ ಪ್ರಯೋಗದ ಕಾರ್ಯಾಚರಣೆ ಆರಂಭವಾಗಿದೆ. ಬುಧವಾರದಿಂದ ಗುರುವಾರ ಮಧ್ಯಾಹ್ನದ ವರೆಗೆ ಸಂಚಾರ ನಿಯಮ ಉಲ್ಲಂಘಿಸಿದ ಒಟ್ಟು 2,978 ಪ್ರಕರಣಗಳು ದಾಖಲಾಗಿತ್ತು, ರೂ.30.11 ಲಕ್ಷ ದಂಡ ವಸೂಲು ಮಾಡಲಾಗಿದೆ. 

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯಲ್ಲಿ ಒಟ್ಟು 41 ಪ್ರಕರಣಗಳು ದಾಖಲಾಗಿದ್ದು, 1.19 ಲಕ್ಷ ದಂಡ ವಿಧಿಸಲಾಗಿದೆ. ಇದರಲ್ಲಿ ಒಬ್ಬರು ಲೈಸನ್ಸ್ ಇಲ್ಲದ ಹಾಗೂ ಮದ್ಯ ಸೇವನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೂ.15 ಸಾವಿರ ದಂಡ ಪಾವತಿಸಿದ್ದರೆ, 11 ಜನರು ತಲಾ ರೂ.9500 ದಂಡ ಪಾವತಿಸಿದ್ದಾರೆ. 

ಇವೆಲ್ಲವೂ ನ್ಯಾಯಾಲಯದ  ಮೂಲಕ ಪಾವತಿಯಾಗಿದೆ. ಪೊಲೀಸ್ ಕಮಿಷನರೆಟ್'ಗೆ ಈ ವರೆಗೆ ಸರ್ಕಾರದ ಸುತ್ತೋಲೆ ಬಂದಿಲ್ಲ. ಬರೀ ಪ್ರಕರಣ ಮಾತ್ರ ದಾಖಲಿಸಿ ಕೋರ್ಟ್'ಗೆ ಕಳುಹಿಸುತ್ತಿದ್ದಾರೆ ಎಂದು ಹೇಳಲಾಗಿದೆ. 

ದಾವಣಗೆರೆ ಜಿಲ್ಲೆಯಲ್ಲಿ ಮದ್ಯ ಸೇವಿಸಿ ಬೈಕ ಚಾಲನೆಗೆ ಸಂಬಂಧಿಸಿದಂತೆ ಒಂದೇ ಪ್ರಕರಣಕ್ಕೆ ರೂ.10 ಸಾವಿರ ದಂಡ ವಿಧಿಸಲಾಗಿದೆ. ಸದ್ಯ ಗಣೇಶ ಹಾಗೂ ಮೊಹರಂ ಹಬ್ಬದ ಬಂದೋಬಸ್ತಿಗೆ ಪೊಲೀಸರು ಗಮನ ನೀಡಿದ್ದು, ಶೀಘ್ರ ಕಾರ್ಯಾಚರಣೆ ಚುರುಕುಗೊಳಿಸಲು ನಿರ್ಧರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com