ಪ್ರವಾಹ ಪೀಡಿತ ಎಲ್ಲಾ ಸಂತ್ರಸ್ತರಿಗೂ ಸರ್ಕಾರ ಪುನರ್ವಸತಿ ಕಲ್ಪಿಸಲಿದೆ: ಸಚಿವ ಕೆ.ಎಸ್.ಈಶ್ವರಪ್ಪ

ಪ್ರವಾಹ ಪೀಡಿತ ಎಲ್ಲಾ ಸಂತ್ರಸ್ತರಿಗೂ ಸರ್ಕಾರ ಪುನರ್ವಸತಿ ಕಲ್ಪಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಹೇಳಿದ್ದಾರೆ.
ಈಶ್ವರಪ್ಪ
ಈಶ್ವರಪ್ಪ

ಬೆಳಗಾವಿ: ಪ್ರವಾಹ ಪೀಡಿತ ಎಲ್ಲಾ ಸಂತ್ರಸ್ತರಿಗೂ ಸರ್ಕಾರ ಪುನರ್ವಸತಿ ಕಲ್ಪಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶನಿವಾರ ಹೇಳಿದ್ದಾರೆ. 

ಬಹು ಗ್ರಾಮೀಣ ಯೋಜನೆ ಹಾಗೂ ಕೃಷಿ ಭೂಮಿ ನಾಶಗಳನ್ನು ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಈಗಾಗಲೇ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಸಮೀಕ್ಷೆ ಪೂರ್ಣಗೊಂಡ ಬಳಿಕ ಮನೆ ನಿರ್ಮಾಣ ಸೇರಿದಂತೆ ಶಾಶ್ವತ ಪರಿಹಾರ ಒದಗಿಸಲಾಗುತ್ತದೆ ಎಂದು ಹೇಳಿದ್ದಾರೆ. 

ಯಾವುದೇ ದಾಖಲಾತಿಗಳನ್ನು ಕೇಳದೆ ಪ್ರವಾಹ ಬಾಧಿತ ಎಲ್ಲಾ ಕುಟುಂಬಗಳಿಗೂ ರೂ.10 ಸಾವಿರ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಮನೆಗಳು ಕುಸಿದಿರುವ ಬಗ್ಗೆ ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿದ್ದಾರೆ. ಸಮೀಕ್ಷೆ ವರದಿ ಆಧರಿಸಿ ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಾಣ ಸೇರಿದಂತೆ ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com