ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರುವ ಯಾವುದೇ ಪ್ರಸ್ತಾಪಗಳಿಲ್ಲ: ಮುಖ್ಯಮಂತ್ರಿ ಕಚೇರಿ

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸದ ರಸ್ತೆಯಲ್ಲಿ ಅಧಇಕಾರಿಗಳ ಮೂಲಕ ಮಾಧ್ಯಮಗಳ ಪ್ರವೇಶ ನಿರ್ಬಂಧಿಸಿ ವಿವಾದಕ್ಕೀಡಾಗಿದ್ದ ರಾಜ್ಯ ಸರ್ಕಾರ ಇದೀಗ ವಿಧಾನಸೌಧ, ವಿಕಾಸಸೌಧ ಪ್ರವೇಶಕ್ಕೂ ಪರ್ತಕರ್ತರಿಗೆ ಸಂಖ್ಯೆ ನಿಗದಿಪಡಿಸಿದೆ ಎಂಬುದನ್ನು ಮುಖ್ಯಮಂತ್ರಿಗಳ ಕಚೇರಿ ಶನಿವಾರ ತಿರಸ್ಕರಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸದ ರಸ್ತೆಯಲ್ಲಿ ಅಧಇಕಾರಿಗಳ ಮೂಲಕ ಮಾಧ್ಯಮಗಳ ಪ್ರವೇಶ ನಿರ್ಬಂಧಿಸಿ ವಿವಾದಕ್ಕೀಡಾಗಿದ್ದ ರಾಜ್ಯ ಸರ್ಕಾರ ಇದೀಗ ವಿಧಾನಸೌಧ, ವಿಕಾಸಸೌಧ ಪ್ರವೇಶಕ್ಕೂ ಪರ್ತಕರ್ತರಿಗೆ ಸಂಖ್ಯೆ ನಿಗದಿಪಡಿಸಿದೆ ಎಂಬುದನ್ನು ಮುಖ್ಯಮಂತ್ರಿಗಳ ಕಚೇರಿ ಶನಿವಾರ ತಿರಸ್ಕರಿಸಿದೆ. 

ಭದ್ರತಾತ ದೃಷ್ಟಿಯಿಂದ ಮಾರ್ಗಸೂಚಿಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿದ್ದು, ಸರ್ಕಾರದ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅದಿಕಾರಿಗಳು, ಸಿಬ್ಬಂದಿ ಸಚಿವಾಲಯೇತರ ಖಾಸಗಿ ನೌಕರರು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿ, ನಿಗಮ, ಮಂಡಳಿಗಳ ಅಧ್ಯಕ್ಷರು, ಕಾರ್ಯನಿರ್ವಾಹಣೆ ನಿರ್ದೇಶಕರು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಅಧ್ಯಕ್ಷಕರು, ಪದಾಧಿಕಾರಿಗಳು ಸೇರಿದಂತೆ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡ ಪ್ರವೇಶಕ್ಕೆ ಬರುವ ಪ್ರತಿಯೊಬ್ಬರಿಗೂ ಗುರುತಿನ ಚೀಟಿ ಕಡ್ಡಾಯಗೊಳಿಸಿ ಆಡಳಿತ ಮತ್ತು ಸುಧಾರಣಾ ಇಲಾಖೆ ಆದೇಶ ಮಾಡಿದೆ ಎಂದು ಹೇಳಲಾಗುತ್ತಿದೆ. 

ಅದೇ ರೀತಿ, ಪತ್ರಕರ್ತರ ಪೈಕಿ ವಾರ್ತಾ ಮತ್ತು ಪ್ರಸಾರ ಇಲಾಖೆ ವತಿಯಿಂದ ಶಿಫಾರಸು ಮಾಡಲಾದ ಗರಿಷ್ಠ 150 ಪತ್ರಕರ್ತರಿಗೆ ಮಾತ್ರ ಇಲಾಖೆಯ ಹಳದಿ ಬಣ್ಣದ ಗುರುತಿನ ಚೀಟಿ ನೀಡಿ ಪ್ರವೇಶಕ್ಕೆ ಅವಕಾಶ ನೀಡಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 

ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವುದು ಉತ್ತಮ ನಿರ್ಧಾರವಲ್ಲ ಎಂದು ಟೀಕೆ ಮಾಡಿದ್ದಾರೆ. 

ನಿರ್ಧಾರ ಕುರಿತಂತೆ ಟೀಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಕಚೇರಿಯ ಹಿರಿಯ ಅಧಿಕಾರಿ, ರಾಜ್ಯಸರ್ಕಾರ ಇಂತಹ ಯಾವುದೇ ಪ್ರಸ್ತಾಪಗಳ ಕುರಿತು ಚಿಂತನೆ ನಡೆಸುತ್ತಿಲ್ಲ. ಡಿಪಿಎಆರ್ ಅಥವಾ ಯಾವುದೇ ಇಲಾಖೆಗಳೇ ಆದರೂ ಇಂತಹ ಪ್ರಸ್ತಾಪಗಳನ್ನು ತಂದರೂ ಅದಕ್ಕೆ ಒಪ್ಪಿಗೆ ಸಿಗುವುದಿಲ್ಲ. ಯಾವುದೇ ಪತ್ರಕರ್ತರ ಮೇಲೂ ಸರ್ಕಾರ ನಿರ್ಬಂಧ ಹೇರಿಲ್ಲ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com