ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಮಾಜಿ ಡಿಸಿಎಂ ಪರಮೇಶ್ವರ್​ಗೆ ನೋಟಿಸ್

ಒಂದು ವಾರದೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರಿ​ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ನೋಟಿಸ್ ಜಾರಿ ಮಾಡಿದೆ.
ಜಿ.ಪರಮೇಶ್ವರ್
ಜಿ.ಪರಮೇಶ್ವರ್

ಬೆಂಗಳೂರು: ಒಂದು ವಾರದೊಳಗೆ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರಿ​ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ನೋಟಿಸ್ ಜಾರಿ ಮಾಡಿದೆ.

ಸದಾಶಿವನಗರದ ಎರಡನೇ ಹಂತದ  ಮನೆ ಸಂಖ್ಯೆ 94/ಎ ರಾಜಮಹಲ್​ ವಿಲಾಸ್​ ಮನೆಯನ್ನು ಈ ಹಿಂದೆ ಮೈತ್ರಿ ಸರ್ಕಾರದ ಮೊದಲ ಅವಧಿಯಲ್ಲಿ ಗೃಹ ಸಚಿವರಾಗಿದ್ದ ಡಿಸಿಎಂ ಪರಮೇಶ್ವರ್​ಗೆ ಹಂಚಿಕೆ ಮಾಡಲಾಗಿತ್ತು. ಪ್ರಸ್ತುತ ಈ ಮನೆಯನ್ನು ರಾಜ್ಯ ಗೃಹ ಸಚಿವ ಬಸವರಾಜ್​ ಬೊಮ್ಮಯಿ ಅವರ ಕಚೇರಿ ಉಪಯೋಗಕ್ಕೆ ಹಂಚಿಕೆ ಮಾಡಲಾಗಿದ್ದು, ನಿವಾಸವನ್ನು ಕೂಡಲೇ ಖಾಲಿ ಮಾಡುವಂತೆ ಪರಮೇಶ್ವರ್ ಅವರಿಗೆ ಸೂಚಿಸಲಾಗಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿ ಒಂದೂವರೆ ತಿಂಗಳು ಕಳೆದಿದ್ದರೂ, ಪರಮೇಶ್ವರ್​ ಮಾತ್ರ ಇನ್ನೂ ಮನೆ ಖಾಲಿ ಮಾಡಿಲ್ಲ. ಈ ಹಿನ್ನೆಲೆ ಒಂದುವಾರದೊಳಗೆ ಮನೆಯನ್ನು ಖಾಲಿ ಮಾಡುವಂತೆ ಬಿಡಿಎ ಸೂಚನೆ ನೀಡಿದೆ.

ಜೊತೆಗೆ ವಿದ್ಯುಚ್ಛತ್ತಿ ವೆಚ್ಚ ಹಾಗೂ ನೀರಿನ ವೆಚ್ಚವನ್ನು ಸಂಬಂಧಿಸಿದ ಇಲಾಖೆಗೆ ಪಾವತಿಸಿದ ಬಿಲ್ಲುಗಳ ಜೊತೆಗೆ ಪ್ರಾಧಿಕಾರದ ಸುಪರ್ದಿಗೆ ವಹಿಸುವಂತೆ ನೊಟೀಸಿನಲ್ಲಿ ಉಲ್ಲೇಖ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com