ಧಾರವಾಡ: ಭೂ ವಿವಾದ-ತಂದೆ ಮಗನ ಬರ್ಬರ ಹತ್ಯೆ, 13 ಮಂದಿ ಬಂಧನ

ಜಮೀನು ವಿಚಾರವಾಗಿ ತಂದೆ ಹಾಗೂ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಜಮ್ಮಿಹಾಳ ಗ್ರಾಮದ ಹೊರ ವಲಯದಲ್ಲಿ ಸೋಮವಾರ ರಾತ್ರಿ ನಡೆದಿದೆ
 

Published: 10th September 2019 03:59 PM  |   Last Updated: 10th September 2019 04:02 PM   |  A+A-


ಸಂಗ್ರಹ ಚಿತ್ರ

Posted By : Raghavendra Adiga
Source : UNI

ಧಾರವಾಡ: ಜಮೀನು ವಿಚಾರವಾಗಿ ತಂದೆ ಹಾಗೂ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಜಮ್ಮಿಹಾಳ ಗ್ರಾಮದ ಹೊರ ವಲಯದಲ್ಲಿ ಸೋಮವಾರ ರಾತ್ರಿ ನಡೆದಿದೆ

ಕಲಘಟಗಿ ಪಿಎಲ್ ಡಿ ಬ್ಯಾಂಕ್ ಸದಸ್ಯ ವೀರಭದ್ರಪ್ಪ ಸತ್ತೂರು (55) ರವಿಕುಮಾರ್ ಸತ್ತೂರು (29) ಕೊಲೆಯಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಹಿಂದೆ ಗ್ರಾಮದ ಅಕ್ಕಿ ಹಾಗೂ ಸತ್ತೂರು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಇದೇ ವಿಚಾರವಾಗಿ ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಮತ್ತೆ ವಾಗ್ದಾದ ನಡೆದಿದ್ದು, ಅಕ್ಕಿ ಕುಟುಂಬದ ಸದಸ್ಯರು ವೀರಭದ್ರಪ್ಪ ಅವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿದ್ದು, ಪುತ್ರ ರವಿಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ವೀರಭದ್ರಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದು, ರವಿಕುಮಾರ್ ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾದೇ ಮಂಗಳವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ. ಪ್ರಕರಣ ಸಂಬಂಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ವರ್ಟಿಕ ಕಟಿಯಾರ್ ಮಾತನಾಡಿ, ಜಮೀನು ವಿವಾದ ಹಾಗೂ ದೇವಸ್ಥಾನದ ಪೂಜಾರಿಕೆ ವಿಚಾರದಲ್ಲಿ ಎರಡೂ ಕುಟುಂಬಗಳ ನಡುವೆ ದ್ವೇಷ ಇತ್ತು. ಕೊಲೆಯಲ್ಲಿ ಭಾಗಿಯಾದ 17 ಜನರ ಪೈಕಿ ಈಗಾಗಲೇ 13 ಜನರನ್ನು ಬಂಧಿಸಲಾಗಿದ್ದು, ಪ್ರಕರಣ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಐವರು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು. 

Stay up to date on all the latest ರಾಜ್ಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp