ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಡಿಸಿಎಂ ಕಾರಜೋಳ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ

ನೆಲಮಂಗಲ ಟೌನ್ ನ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

Published: 11th September 2019 01:04 PM  |   Last Updated: 11th September 2019 01:04 PM   |  A+A-


Govind karjol

ಗೋವಿಂದ ಕಾರಜೋಳ

Posted By : Shilpa D
Source : UNI

ಬೆಂಗಳೂರು: ನೆಲಮಂಗಲ ಟೌನ್ ನ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಹಾಸ್ಟೆಲ್ ಕಟ್ಟಡದ ಮುಂಭಾಗ ಇದ್ದ ಕಸದ ರಾಶಿ ಕಂಡು ಕೆಂಡಾಮಂಡಲರಾದ ಕಾರಜೋಳ, ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ ತರಾಟೆಗೆ ತೆಗೆದುಕೊಂಡರು. ಕೂಡಲೇ ಕಸ ತೆಗೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಾಸ್ಟೆಲ್ ವ್ಯವಸ್ಥೆಯ ಬಗ್ಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳೊಂದಿಗೆ ಪರಿಶೀಲಿಸಿದರು. ವಿಶೇಷವೆಂದರೆ ನೆಲಮಂಗಲ ತಾಲೂಕು ಮಟ್ಟದ ಯಾವೊಬ್ಬ ಅಧಿಕಾರಿಗೂ ಮಾಹಿತಿ ನೀಡದೆ ದಿಢೀರ್ ಭೇಟಿ ನೀಡುವ ಮೂಲಕ ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಿದ್ದಾರೆ. ಕಸ ನಿರ್ವಹಣೆಯಲ್ಲಿ ನೆಲಮಂಗಲ ಪುರಸಭೆ ವೈಫಲ್ಯವನ್ನು ಕಂಡ ಡಿಸಿಎಂ, ಪುರಸಭೆ ಅಧಿಕಾರಿಗಳ ಕಾರ್ಯ ವೈಖರಿಗೆ ಡಿಸಿಎಂ ಗೋವಿಂದ ಕಾರಜೋಳ ಬೇಸರ ವ್ಯಕ್ತಪಡಿಸಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp