ಬೆಂಗಳೂರು: ಶಿಕ್ಷಕರ ವರ್ಗಾವಣೆ: ಶಿಕ್ಷಣ ಸಚಿವರ ಜೊತೆ ಎಂಎಲ್ ಸಿಗಳ ಸಭೆ

ಶಿಕ್ಷಕರ ವರ್ಗಾವಣೆ ನಿಯಮಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರ ಜೊತೆ ಸಭೆ ನಡೆಸಿದರು.

Published: 12th September 2019 01:11 PM  |   Last Updated: 12th September 2019 01:11 PM   |  A+A-


Suresh Kumar

ಸುರೇಶ್ ಕುಮಾರ್

Posted By : Shilpa D
Source : The New Indian Express

ಬೆಂಗಳೂರು: ಶಿಕ್ಷಕರ ವರ್ಗಾವಣೆ ನಿಯಮಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರ ಜೊತೆ ಸಭೆ ನಡೆಸಿದರು.

ಶಿಕ್ಷಕರ ವರ್ಗಾವಣೆ  ಪ್ರಕ್ರಿಯೆಗೆ ತೊಡಕಾಗದಂತೆ ಶಾಸಕರು ನೀಡಿದ ಸಲಹೆಗಳನ್ನು ಆರಿಸಿ ಈ ಸಂಬಂಧ ಕಾಯ್ದೆಗೆ ತಿದ್ದುಪಡಿ ತರಲು ಚರ್ಚಿಸಲಾಗುವುದು,  ಕಳೆದ ವಿಧಾನ ಮಂಡಲದ ಅಧಿವೇಶನದಲ್ಲಿ ಎರಡು ಸದನಗಳ ಧರಣಿ ಸಮಯದಲ್ಲಿ ತಿದ್ದುಪಡಿ ಅಂಗೀಕಾರವಾಗಿತ್ತು. ಆದರೆ ಈ ಬಾರಿ ಮಂಡಿಸುವಾಗ  ಸವಿಸ್ತಾರವಾಗಿ  ಚರ್ಚೆಗೆ ಅವಕಾಶ ಕಲ್ಪಿಸಿ ಶಿಕ್ಷಕ ಹಾಗೂ ವಿದ್ಯಾರ್ಥಿ ಸ್ನೇಹಿ  ವರ್ಗಾವಣೆ ನೀತಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಕ್ಯಾನ್ಸರ್ ಪೀಡಿತ ಶಿಕ್ಷಕಿಯೊಬ್ಬರಿಗೆ ಮಾನವೀಯ ನೆಲೆಗಟ್ಟಿನಲ್ಲಿ ವರ್ಗಾವಣೆ ವಿನಾಯಿತಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಡೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಶಿಕ್ಷಕಿ ವರ್ಗಾವಣೆ ಕುರಿತಾಗಿ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅವರು ವರ್ಗಾವಣೆ ಆದೇಶ ರದ್ದು ಮಾಡಿದ್ದಾರೆ.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp