ತುಮಕೂರು: ನಡುರಸ್ತೆಯಲ್ಲೇ ಹೊತ್ತಿ ಉರಿದ ಬಸ್, 6 ಮಂದಿಗೆ ಗಾಯ, ಇಬ್ಬರು ಗಂಭೀರ

ಖಾಸಗಿ ಬಸ್ಸೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಪರಿಣಾಮ ಆರು ಮಂದಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಸಮೀಪ ನಡೆದಿದೆ.
ತುಮಕೂರು: ಖಾಸಗಿ ಬಸ್ಸೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಪರಿಣಾಮ ಆರು ಮಂದಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಸಮೀಪ ನಡೆದಿದೆ.  ರಾಷ್ಟ್ರೀಯ ಹೆದ್ದಾರಿ 5ರ ಊರುಕೆರೆ ಸಮೀಪ ಬಸ್ ಚಲಿಸುತ್ತಿದ್ದ ವೇಳೆಯೇ ಬೆಂಕಿ ಹೊತ್ತಿ ಭಸ್ಮವಾಗಿದೆ. ಶುಕ್ರವಾರ ಮುಂಜಾನೆ 3.30ರ ಸುಮಾರು ಘಟನೆ ನ
ತುಮಕೂರು: ಖಾಸಗಿ ಬಸ್ಸೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಪರಿಣಾಮ ಆರು ಮಂದಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಸಮೀಪ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 5ರ ಊರುಕೆರೆ ಸಮೀಪ ಬಸ್ ಚಲಿಸುತ್ತಿದ್ದ ವೇಳೆಯೇ ಬೆಂಕಿ ಹೊತ್ತಿ ಭಸ್ಮವಾಗಿದೆ. ಶುಕ್ರವಾರ ಮುಂಜಾನೆ 3.30ರ ಸುಮಾರು ಘಟನೆ ನ

ತುಮಕೂರು: ಖಾಸಗಿ ಬಸ್ಸೊಂದು ನಡುರಸ್ತೆಯಲ್ಲೇ ಹೊತ್ತಿ ಉರಿದ ಪರಿಣಾಮ ಆರು ಮಂದಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಸಮೀಪ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 5ರ ಊರುಕೆರೆ ಸಮೀಪ ಬಸ್ ಚಲಿಸುತ್ತಿದ್ದ ವೇಳೆಯೇ ಬೆಂಕಿ ಹೊತ್ತಿ ಭಸ್ಮವಾಗಿದೆ. ಶುಕ್ರವಾರ ಮುಂಜಾನೆ 3.30ರ ಸುಮಾರು ಘಟನೆ ನಡೆದಿದ್ದು ಆ ವೇಳೆ ಬಸ್ ನಲ್ಲಿ 30 ಜನ ಪ್ರಯಾಣಿಸುತ್ತಿದ್ದರು. ಅವರಲ್ಲಿ ಆರು ಮಂದಿಗೆ ಗಾಯಗಳಾಗಿದ್ದು ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

ಗಂಭೀರ ಗಾಯಗೊಂಡಿರುವ ಗುಲ್ಬರ್ಗ ನಿವಾಸಿ ನೀಲಮ್ಮ ಹಿರೇಮಠ(55) ಹಾಗೂ ಬಸ್ ಚಾಲಕ (ಹೆಸರು ಬಹಿರಂಗವಾಗಿಲ್ಲ) ನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಉಳಿದಂತೆ ಹುಣಸಗಿಯ ಪ್ರಸಾದ್ (31), ತಾಳಿಕೋಟೆಯ ತೌಸಿಫ್ (21), ಮೆಹಬೂಬ್ ಪಾಷ(25), ಶಬ್ಬೀರ್ (27), ಕೆಂಬಾವಿಯ ಆಭಿ  ಎನ್ನುವವರಿಗೂ ಸಹ ಸುಟ್ಟ ಗಾಯಗಳಾಗಿದೆ.ಅವರುಗಳನ್ನು ಜಿಲ್ಲಾ ಆಸ್ಪತ್ರೆ, ಶ್ರೀದೇವಿ ಆಸ್ಪತ್ರೆ ಹಾಗೂ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ದುರ್ಘಟನೆಗೀಡಾದ ಬಸ್ಸು ವಿಜಯಪುರದಿಂದ ಬೆಂಗಳೂರುಗೆ ಆಗಮಿಸುತ್ತಿತ್ತು. ರಾಯಲ್ ಟ್ರಾನ್ಸ್ ಪೋರ್ಟ್ ಗೆ ಸೇರಿದ್ದ ಸ್ಲೀಪರ್‍ಕೋಚ್ ಬಸ್‍ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.ಬಸ್ ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಪ್ರಯಾಣಿಕರು ಚಾಲಕನಿಗೆ ಎಚ್ಚರಿಕೆ ನೀಡಿದ್ದಾರೆ. ಆದರೆ ಚಾಲಕ ಉದಾಸೀನ ತೋರಿ ಏನೂ ಆಗಿಲ್ಲವೆಂದು ನಿರ್ಲಕ್ಷದಿಂದ ಬಸ್ ಚಾಲನೆ ಮಾಡಿದ್ದಾನೆ. ಇದಾಗಿ ಸುಮಾರು 12 ಕಿಮೀ ದೂರ ಬಂದ ನಂತರ ಇಂಜಿನ್‍ನಲ್ಲಿ ದಟ್ಟ ಹೊಗೆ ಆವರಿಸಿ ಬೆಂಕಿ ಹೊತ್ತಿಕೊಂಡಿದೆ. ಅದಾಗ ಚಾಲಕ ಬಸ್ ನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಇಳಿಯಲು ಹೇಳುವಷ್ಟರಲ್ಲೇ ಬೆಂಕಿ ಸಂಪೂರ್ಣ ಬಸ್ ಗೆ ಆವರಿಸಿಕೊಂಡಿದೆ.

ಮಾಹಿತಿ ಪಡೆದ  ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಮಧುಸೂದನ್, ಸಬ್‍ಇನ್‍ಸ್ಪೆಕ್ಟರ್ ಲಕ್ಷ್ಮಯ್ಯ, ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ನೆರವಾದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com