ಎಸ್ ಐ,ಎಸಿಪಿ ದರ್ಜೆಯ ಅಧಿಕಾರಿಗಳಿಗೂ ಶೀಘ್ರದಲ್ಲಿಯೇ ವೇತನ ಪರಿಷ್ಕರಣೆ- ಬಸವರಾಜ ಬೊಮ್ಮಾಯಿ  

ಪೊಲೀಸರ ವೇತನ ಪರಿಷ್ಕರಣೆ ಮಾಡಿ ಶುಕ್ರವಾರ ಅಧಿಸೂಚನೆ ಹೊರಡಿಸಿದ್ದು, ಹಣಕಾಸು ಇಲಾಖೆ ಶಿಫಾರಸ್ಸಿನಂತೆ ಉಳಿದವರಿಗೂ ವೇತನ ಪರಿಷ್ಕರಣೆಯನ್ನು ಶೀಘ್ರದಲ್ಲಿಯೇ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Published: 14th September 2019 07:58 PM  |   Last Updated: 14th September 2019 07:58 PM   |  A+A-


BasavarajBommai

ಬಸವರಾಜ್ ಬೊಮ್ಮಾಯಿ

Posted By : Nagaraja AB
Source : UNI

ಬೆಂಗಳೂರು: ಪೊಲೀಸರ ವೇತನ ಪರಿಷ್ಕರಣೆ ಮಾಡಿ ಶುಕ್ರವಾರ ಅಧಿಸೂಚನೆ ಹೊರಡಿಸಿದ್ದು, ಹಣಕಾಸು ಇಲಾಖೆ ಶಿಫಾರಸ್ಸಿನಂತೆ ಉಳಿದವರಿಗೂ ವೇತನ ಪರಿಷ್ಕರಣೆಯನ್ನು ಶೀಘ್ರದಲ್ಲಿಯೇ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಪಟ್ಟಿಯಲ್ಲಿ ಕೈ ಬಿಟ್ಟು ಹೋಗಿರುವ ಎಸ್ ಐ, ಎಸಿಪಿ ದರ್ಜೆಯ ಅಧಿಕಾರಿಗಳು, ಅಗ್ನಿ ಶಾಮಕ ಸಿಬ್ಬಂದಿ ಮತ್ತು ಬಂಧಿಖಾನೆ ಅಧಿಕಾರಿಗಳಿಗೂ ಸಹ ವೇತನ ಪರಿಷ್ಕರಣೆ ಮಾಡಲಾಗುವುದು, ಈ ಸಂಬಂಧ ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳುಹಿಸಿದ್ದೇವೆ. ಮತ್ತೊಂದು ಸುತ್ತೋಲೆ ಹೊರಡಿಸಿ ಅವರಿಗೂ ವೇತನ ಪರಿಷ್ಕರಣೆ ಮಾಡಲಾಗುವುದು ಎಂದರು.

ಜಿಎಸ್ ಟಿ ಕುರಿತಂತೆ ಸೆಪ್ಟೆಂಬರ್ 20 ರಂದು ಪಣಜಿಯಲ್ಲಿ ನಡೆಯಲಿರುವ ಜಿಎಸ್ ಟಿ ಮಂಡಳಿ ಸಭೆಯಲ್ಲಿ ತಾವು ಪಾಲ್ಗೊಳ್ಳಲಿದ್ದು, ರಾಜ್ಯದ ನಿಲುವನ್ನು ಪ್ರಕಟಿಸುವುದಾಗಿ ತಿಳಿಸಿದ ಸಚಿವರು, ಅದಕ್ಕೆ ಪೂರ್ವಭಾವಿಯಾಗಿ ಇಂದು ಬೆಂಗಳೂರಿನಲ್ಲಿ ಸಭೆ ನಡೆದಿದ್ದು, ಹಲವು ವಿಷಯಗಳ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

Stay up to date on all the latest ರಾಜ್ಯ news with The Kannadaprabha App. Download now
Poll
Coronavirus Lockdown

ಕರ್ಫ್ಯೂ, ಭಾನುವಾರದ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಕೊರೋನಾ ಪ್ರಮಾಣ ತಗ್ಗಲಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
facebook twitter whatsapp