ಬೆಂಗಳೂರು: ಟಿಕ್ ಟಾಕ್ ಕ್ರಶ್: ತಾಯಿ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ!

ಟಿಕ್ ಟಾಕ್ ನೋಡಲು ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಮನೆಯಲ್ಲಿ ಯಾರು ಇಲ್ಲದ್ದನ್ನು ನೋಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಟಿಕ್ ಟಾಕ್ ನೋಡಲು ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ಮನೆಯಲ್ಲಿ ಯಾರು ಇಲ್ಲದ್ದನ್ನು ನೋಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ಬೆಂಗಳೂರಿನ ಹನುಮಂತ ನಗರದ ನಿವಾಸಿ 19 ಪ್ರಿಯಾಂಕಾ ಟಿಕ್ ಟಾಕ್ ವ್ಯಾಮೋಹಕ್ಕೆ ಬಲಿಯಾಗಿದ್ದಾಳೆ. ಸಂಜೆ ಶಾಲೆಯಿಂದ ಮನೆಗೆ ಬಂದ ಪ್ರಿಯಾಂಕಾ ತಾಯಿಯ ಮೊಬೈಲ್ ತೆಗೆದುಕೊಂಡು ತನ್ನ ಗೆಳತಿಗೆ ಮನೆಗೆ ಹೋಗಲು ರೆಡಿಯಾಗಿರುತ್ತಾಳೆ. ಅದನ್ನು ಕಂಡ ತಾಯಿ ಮೊಬೈಲ್ ತೆಗೆದುಕೊಂಡು ಹೋಗಬೇಡ ಎಂದು ಬುದ್ಧಿವಾದ ಹೇಳಿ ಮೊಬೈಲ್ ಅನ್ನು ಕಿತ್ತು ಇಟ್ಟುಕೊಂಡಿದ್ದರು. 

ಇದರಿಂದ ಕೋಪಗೊಂಡ ಪ್ರಿಯಾಂಕಾ ಸ್ನೇಹಿತೆ ಮನೆಗೆ ಹೋಗದೆ ತನ್ನ ಕೋಣೆಗೆ ಹೋಗಿದ್ದಾಳೆ. ಆಗ ತಾಯಿ ತಾನು ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಹೋಗಿ ಬರುವಷ್ಟರಲ್ಲಿ ಪ್ರಿಯಾಂಕಾ ನೇಣಿಗೆ ಶರಣಾಗಿದ್ದಾಳೆ. ಈ ಸಂಬಂಧ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com