ಮೈಸೂರು ದಸರಾ 2019: ಯುವ ದಸರಾ ಉದ್ಘಾಟನೆಗೆ ವಿಶ್ವ ಚಾಂಪಿಯನ್ ಪಿ.ವಿ.ಸಿಂಧುಗೆ ಅಧಿಕೃತ ಆಹ್ವಾನ

ಮೈಸೂರು ದಸರಾ 2019 ಉತ್ಸವಕ್ಕೆ ದಿನಗಣನೆ ಆರಂಭವಾಗಿರುವಂತೆ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರನ್ನು ಯುವ ದಸರಾ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನಿಸಲಾಗಿದೆ.

Published: 15th September 2019 12:02 PM  |   Last Updated: 15th September 2019 12:02 PM   |  A+A-


PV Sindhu

ಪಿ.ವಿ.ಸಿಂಧುಗೆ ದಸರಾ ಆಹ್ವಾನ

Posted By : Srinivasamurthy VN
Source : Online Desk

ಮೈಸೂರು: ಮೈಸೂರು ದಸರಾ 2019 ಉತ್ಸವಕ್ಕೆ ದಿನಗಣನೆ ಆರಂಭವಾಗಿರುವಂತೆ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರನ್ನು ಯುವ ದಸರಾ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನಿಸಲಾಗಿದೆ.

ನಾಲ್ಕು ದಿನಗಳ ಹಿಂದೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪತ್ರ ಮುಖೇನ ಪಿ.ವಿ.ಸಿಂಧು ಅವರನ್ನು ಯುವ ದಸರಾ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ನಿನ್ನೆ ಸಂಸದ ಪ್ರತಾಪ್ ಸಿಂಹ ಅವರು ರಾಜ್ಯ ಸರ್ಕಾರದ ಪರವಾಗಿ ಶನಿವಾರ ಪಿವಿ ಸಿಂಧು ಅವರನ್ನು ಭೇಟಿ ಮಾಡಿ ಅಧಿಕೃತ ಆಹ್ವಾನ ನೀಡಿದ್ದಾರೆ. ಈ ವೇಳೆ ಪ್ರತಾಪ್ ಸಿಂಹ ಅವರೊಂದಿಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಷ್ಯಂತ್ ಅವರು ಕೂಡ ಸಾಥ್ ನೀಡಿದರು.

ಇತ್ತೀಚೆಗೆ ನಡೆದ ಬ್ಯಾಡ್ಮಿಂಟನ್ ವಿಶ್ವಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ ದೇಶದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪಿ.ವಿ. ಸಿಂಧು ಅವರು ಅಕ್ಟೋಬರ್ 1ರಂದು ನಡೆಯಲಿರುವ ಯುವ ದಸರಾ 2019ರ ಉದ್ಘಾಟನೆಗೆ ಆಗಮಿಸಲಿದ್ದಾರೆ.

Stay up to date on all the latest ರಾಜ್ಯ news
Poll
Farmers

ಕೇಂದ್ರ ಸರ್ಕರದ ಕೃಷಿ ಸುಧಾರಣಾ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp