ಪ್ರವಾಹ ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಮೋದಿಗಿಲ್ಲ: ಸಿದ್ದರಾಮಯ್ಯ

ಉತ್ತರ ಕರ್ನಾಟಕ ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ದಿನಕ್ಕೊಂದು ದೇಶ ಸುತ್ತುವ, ಗಳಿಗೆಗೊಂದು ವೇಷ ಬದಲಿಸುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒಂದು ಘಳಿಗೆ ಬಂದು ಉತ್ತರ ಕರ್ನಾಟಕ ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.


ಈ ಕುರಿತು ಟ್ವೀಟ್‌ ಮಾಡಿರುವ ಅವರು, "2009ರಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ್ದ ನೆರೆಯ ಸಂದರ್ಭದಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಧಾವಿಸಿ ಬಂದು ಸಮೀಕ್ಷೆ ನಡೆಸಿ ತಕ್ಷಣ ರೂ. 1,500 ಕೋಟಿ ಪರಿಹಾರ ಘೋಷಿಸಿದ್ದರು. ಈಗಿನ ಪ್ರಧಾನಿ ಎಲ್ಲಿದ್ದಾರೆ ? ಎಂದು ಪ್ರಶ್ನಿಸಿದ್ದಾರೆ.


ನಮ್ಮ ಪ್ರತಿಭಾವಂತ ವಿಜ್ಞಾನಿಗಳು ಹಗಲಿರುಳು ಶ್ರಮಿಸಿ ನಡೆಸಿದ ಚಂದ್ರಯಾನ-2 ಪ್ರಯೋಗ, ನರೇಂದ್ರ ಮೋದಿ ಹಾಜರಿದ್ದರೂ ವಿಫಲವಾಯಿತು. ಪ್ರಧಾನಿಗಳು ಅಷ್ಟೇ ಸಮಯವನ್ನು ಅತಿವೃಷ್ಟಿ ಪೀಡಿತ ಪ್ರದೇಶದ ಭೇಟಿಗೂ ನೀಡಿದ್ದರೆ ಪ್ರಾಯಶ್ಚಿತ ಮಾಡಿಕೊಂಡಂತಾಗುತ್ತಿತ್ತು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com