ದೇವಸ್ಥಾನಗಳಲ್ಲಿ ಪ್ರಸಾದ ವಿತರಣೆಗೂ ಮುನ್ನ ಪರವಾನಿಗೆ ಪಡೆಯಲು ಸೂಚನೆ

ದೇವಸ್ಥಾನ, ಪಾರ್ಥನಾ ಮಂದಿರಗಳಲ್ಲಿ ದೈನಂದಿನ ಪ್ರಸಾದ ತಯಾರಿಕೆ, ವಿತರಣೆ, ಮಾರಾಟ ಮತ್ತು ಹಂಚಿಕೆಗೆ ಸಂಬಂಧಿಸಿದಂತೆ ಅಂಕಿತ ಅಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮತ್ತು ಪರವಾನಗಿಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸೂಚಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹಾಸನ: ದೇವಸ್ಥಾನ, ಪಾರ್ಥನಾ ಮಂದಿರಗಳಲ್ಲಿ ದೈನಂದಿನ ಪ್ರಸಾದ ತಯಾರಿಕೆ, ವಿತರಣೆ, ಮಾರಾಟ ಮತ್ತು ಹಂಚಿಕೆಗೆ ಸಂಬಂಧಿಸಿದಂತೆ ಅಂಕಿತ ಅಧಿಕಾರಿಗಳ ಕಚೇರಿಯಲ್ಲಿ ನೋಂದಣಿ ಮತ್ತು ಪರವಾನಗಿಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸೂಚಿಸಿದ್ದಾರೆ.

ಈ ಸಂಬಂಧ ಬೆಂಗಳೂರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಜಂಟಿ ಆಯುಕ್ತರ ಸೂಚನೆ ನೀಡಿದ್ದಾರೆ ಎಂದವರು ತಿಳಿಸಿದರು.

ಜಿಲ್ಲೆಯಲ್ಲಿರುವ ಎಲ್ಲಾ ದೇವಸ್ಥಾನ, ಪ್ರಾರ್ಥನಾ ಮಂದಿರಗಳು ಆನ್‍ಲೈನ್ ನಲ್ಲಿ ಲಾಗಿನ್ ಆಗಿ ತಾವೇ ಅರ್ಜಿಯನ್ನು ಸಲ್ಲಿಸಿ ಅರ್ಜಿ ಪ್ರತಿಯೊಂದಿಗೆ ಹಣ ಸಂದಾಯ ಮಾಡಿದ ಚಲನ್ ಪ್ರತಿ ಹಾಗೂ ಸಂಬಂಧಿಸಿದ ದಾಖಲಾತಿಗಳನ್ನು ಸಂಬಂಧಿತ ಅಧಿಕಾರಿಗಳಿಗೆ ಸಲ್ಲಿಸಿ ಪರವಾನಗಿಯನ್ನು ಪಡೆಯಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com