ಅನರ್ಹ ಶಾಸಕರ ಕಾನೂನು ಸಮರ: ಸುಪ್ರೀಂಕೋರ್ಟ್'ನಲ್ಲಿಂದು ಅರ್ಜಿ ವಿಚಾರಣೆ

ವಿಧಾನಸಭೆ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿದ್ದ ಸ್ಪೀಕರ್ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ 17 ಅನರ್ಹ ಶಾಸಕರು ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ವಿಧಾನಸಭೆ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿದ್ದ ಸ್ಪೀಕರ್ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ 17 ಅನರ್ಹ ಶಾಸಕರು ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. 

ಮಂಗಳವಾರ ನ್ಯಾ.ಎನ್.ವಿ.ರಮಣ, ನ್ಯಾ.ಮೋಹನ್ ಶಾಂತನಗೌಡರ್ ಮತ್ತು ನ್ಯಾ.ಅಜಯ್ ರಸ್ತೋಗಿ ಅವರಿರುವ ತ್ರಿಸದಸ್ಯ ನ್ಯಾಯಪೀಠವು ಈ ಅನರ್ಹ ಶಾಸಕರು ಸಲ್ಲಿಸಿರುವ ಒಟ್ಟು 9 ರಿಟ್ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ಈ ಮೂಲಕ ಕಳೆದ ಒಂದೂವರೆ ತಿಂಗಳಿನಿಂದ ಸುಪ್ರೀಂಕೋರ್ಟ್ ವಿಚಾರಣೆಗೆ ಕಾಯುತ್ತಿದ್ದ ಅನರ್ಹ ಶಾಸಕರು ತುಸು ನಿಟ್ಟಿಸಿರು ಬಿಡುವಂತಾಗಿದೆ. 

ಸ್ಪೀಕರ್ ಅವರು ನಮ್ಮ ಸದಸ್ಯತ್ವ ಸ್ಥಾನವನ್ನು ರದ್ದುಪಡಿಸಿ ಸಂಪೂರ್ಣ ಕಾನೂನು ಬಾಹಿರ, ದುರುದ್ದೇಶವನ್ನು ಮತ್ತು ನಿರಂಕುಶ ಆದೇಶವನ್ನು ಹೊರಡಿಸಿದ್ದಾರೆ. ಪಕ್ಷ ವಿರೋಧಿ ನಡೆಗಾಗಿ ಸದಸ್ಯತ್ವವನ್ನು ರದ್ದು ಪಡಿಸುವ ಸಂವಿಧಾನದ 10ರ ಪರಿಚ್ಛೇದವನ್ನು ಅನಾವಶ್ಯವಕಾಗಿ ಸ್ಪೀಕರ್ ಈ ಪ್ರಕರಣದಲ್ಲಿ ಎಳೆದು ತಂದಿದ್ದಾರೆಂದು ಅನರ್ಹ ಶಾಸಕರು ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com