ಡಿ.ಕೆ ಶಿವಕುಮಾರ್ ಅವರೊಂದಿಗೆ ಯಾವುದೇ ಹಣಕಾಸಿನ ವ್ಯವಹಾರವಿಲ್ಲ: ಲಕ್ಷ್ಮೀ‌ ಹೆಬ್ಬಾಳ್ಕರ್  

ಮಂಗಳವಾರ ಜಾರಿ ನಿರ್ದೆಶನಾಲಯದಿಂದ ವಿಚಾರಣೆಗೆ ಹಾಜರಾಗುವಂತೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ನೊಟೀಸ್ ಜಾರಿಯಾಗಿದ್ದು, ಈ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಇಡಿಯಿದ ನೋಟಿಸ್ ಬಂದಿದೆ

Published: 18th September 2019 01:34 PM  |   Last Updated: 18th September 2019 01:34 PM   |  A+A-


Shivakumar And  Laxmi Hebbalkar

ಶಿವಕುಮಾರ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್

Posted By : Shilpa D
Source : UNI

ಬೆಂಗಳೂರು: ಜಾರಿ ನಿರ್ದೇಶನಾಲಯದ ವಿಚಾರಣೆಗೆ ಗುರುವಾರ ಹಾಜರಾಗುವುದಾಗಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ಜಾರಿ ನಿರ್ದೆಶನಾಲಯದಿಂದ ವಿಚಾರಣೆಗೆ ಹಾಜರಾಗುವಂತೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ನೊಟೀಸ್ ಜಾರಿಯಾಗಿದ್ದು, ಈ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಇಡಿಯಿದ ನೋಟಿಸ್ ಬಂದಿದೆ. ಸೆ 14ರಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಹೀಗಾಗಿ ನಾಳೆ ವಿಚಾರಣೆಗೆ ಹಾಜರಾಗಲು ದೆಹಲಿಗೆ ತೆರಳುತ್ತಿರುವುದಾಗಿ ಹೇಳಿದರು.

ಒಂದು ಸಾಲಿನ ಬರಹದಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ನೊಟೀಸ್ ನಲ್ಲಿ ವಿಚಾರಣೆಗೆ ಸಂಬಂಧಿಸಿದಂತೆ ಯಾವುದೇ ಕಾರಣ ನೀಡಿಲ್ಲ, ತಾವು ಸೇರಿದಂತೆ ಒಟ್ಟು 184 ಮಂದಿಗೆ ನೊಟೀಸ್ ನೀಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಡಿ.ಕೆ ಶಿವಕುಮಾರ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಟೀಸ್ ನೀಡಿದ್ದಾರೆಯೋ ಎಂಬುದನ್ನು ನೊಟೀಸ್ ನಲ್ಲಿ ನಮೂದಿಸಿಲ್ಲ. ಶಿವಕುಮಾರ್ ಹಾಗೂ ತಮ್ಮ ನಡುವೆ ಯಾವುದೇ ಹಣಕಾಸಿನ ವ್ಯವಹಾರ ಇಲ್ಲ ಎಂದು ಲಕ್ಷ್ಮೀ‌ ಹೆಬ್ಬಾಳ್ಕರ್  ಸ್ಪಷ್ಟಪಡಿಸಿದ್ದಾರೆ. ಡಿಕೆ ಶಿವಕುಮಾರ್ ಅಕೌಂಟ್ ನಿಂದ ಹೆಬ್ಬಾಳ್ಕರ್‍ ಗೆ ಹಣ ವರ್ಗಾವಣೆ ಆಗಿರುವ ಬಗ್ಗೆ ಇಡಿಗೆ ದಾಖಲೆ ಲಭ್ಯವಾದ ಹಿನ್ನೆಲೆಯಲ್ಲಿ ಸಮನ್ಸ್ ಜಾರಿ ಮಾಡಿದೆ ಎನ್ನಲಾಗುತ್ತಿದೆ.

Stay up to date on all the latest ರಾಜ್ಯ news with The Kannadaprabha App. Download now
facebook twitter whatsapp