ಎಸ್‌ಸಿಪಿ/ಟಿಎಸ್‌ಪಿ ಯೋಜನೆಗೆ ತಿದ್ದುಪಡಿ ಮಾಡಿದರೆ ದಲಿತರ ಬಂಡಾಯ: ಸಿದ್ದರಾಮಯ್ಯ

ಸರ್ಕಾರದ ಬಣ್ಣ ಬಹಳ ಬೇಗ ಬಯಲಾಗುತ್ತಿದೆ. ತನ್ನ ನಿಜಬಣ್ಣ ದಲಿತ ವಿರೋಧಿ ಎನ್ನುವುದು  ಸಾಬೀತಾಗುತ್ತಿದೆ. ನಮ್ಮ ಕಾಲದ ಕ್ರಾಂತಿಕಾರಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯನ್ನು ದುರ್ಬಲಗೊಳಿಸಲು ಹೊರಟರೆ‌ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರದ ಬಣ್ಣ ಬಹಳ ಬೇಗ ಬಯಲಾಗುತ್ತಿದೆ. ತನ್ನ ನಿಜಬಣ್ಣ ದಲಿತ ವಿರೋಧಿ ಎನ್ನುವುದು  ಸಾಬೀತಾಗುತ್ತಿದೆ. ನಮ್ಮ ಕಾಲದ ಕ್ರಾಂತಿಕಾರಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯನ್ನು ದುರ್ಬಲಗೊಳಿಸಲು ಹೊರಟರೆ‌ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ-2013 ಅನ್ನು ಸಮಗ್ರ ಪರಿಷ್ಕರಣೆಗೆ ರಾಜ್ಯ ಸರ್ಕಾರ ಬಯಸಿದೆ ಎಂಬ ಪತ್ರಿಕೆಯೊಂದರ ವರದಿಯನ್ನೂ ಅವರು ಟ್ವೀಟ್‌ಗೆ ಟ್ಯಾಗ್ ಮಾಡಿ ಈ ಎಚ್ಚರಿಕೆ ನೀಡಿದ್ದಾರೆ.

ಎಸ್‌ಸಿಪಿ/ಟಿಎಸ್‌ಪಿ ಯೋಜನೆಗೆ ತಿದ್ದುಪಡಿ ತಂದು ಅನುದಾನ ಕಡಿತಗೊಳಿಸುವ ಬಿಜೆಪಿ ಸರ್ಕಾರದ  ದುಷ್ಟ ಆಲೋಚನೆಯ ವಿರುದ್ಧ ಶಾಸಕರು ಕೂಡ ದನಿ ಎತ್ತಬೇಕು ಎಂದು ವಿನಂತಿಸುತ್ತೇನೆ. ಇಂತಹ ದ್ರೋಹ ಚಿಂತನೆಯನ್ನು ಪಕ್ಷದ ದಾಸ್ಯಕ್ಕೆ ಕಟ್ಟುಬಿದ್ದು ಸಹಿಸಿಕೊಂಡರೆ ಇತಿಹಾಸ ಕ್ಷಮಿಸಲು ಎಂದು ಅವರು ಟ್ವೀಟ್‌ನಲ್ಲಿ ಹರಿಹಾಯ್ದಿದ್ದಾರೆ.

ಐಬಿಪಿಎಸ್ ನಂತರ ಎಲ್‌ಐಸಿ ಪರೀಕ್ಷೆಯಲ್ಲಿಯೂ ಹಿಂದಿ-ಇಂಗ್ಲಿಷ್‌ಗೆ ಮಣೆ, ಕನ್ನಡಕ್ಕೆ ಬರೆ. ಇನ್ನೆಷ್ಟು ದಿನ ಕನ್ನಡಿಗರು ಪರಭಾಷೆಯ ಹೇರಿಕೆಯನ್ನು ಸಹಿಸಿಕೊಳ್ಳಬೇಕು ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಎಲ್ಐಸಿ ಹುದ್ದೆಗಳು ಪರರ ಪಾಲು ಎಂಬ ಪತ್ರಿಕೆಯೊಂದರ ವರದಿಯನ್ನು ಟ್ಯಾಗ್ ಮಾಡಿರುವ ಅವರು, ಭಾರತ ಬಹುತ್ವದ ನೆಲ, ಇಲ್ಲಿನ ವಿವಿಧ ಭಾಷೆ, ಸಂಸ್ಕೃತಿಯನ್ನು ಗೌರವಿಸಿದಾಗ ಮಾತ್ರ ಒಕ್ಕೂಟ ವ್ಯವಸ್ಥೆ ಬಲಗೊಳ್ಳಲು ಸಾಧ್ಯ. ಈ ನೆಲದಲ್ಲಿ ಯಾವುದೇ ಒಂದು ಭಾಷೆ, ಸಮುದಾಯದ ಕಡಗಣನೆ ಸಲ್ಲದು ಎಂದು ಅವರು ಮತ್ತೊಂದು ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
 
ಪ್ರವಾಹ ಸಂತ್ರಸ್ತರಿಗೆ ಇನ್ನೂ ಪರಿಹಾರ ವಿತರಿಸದ ಸರ್ಕಾರದ ವಿರುದ್ಧ ಹರಿಹಾಯ್ದಿರುವ ಅವರು, ಖಾಸಗಿ ಆಸ್ತಿಯನ್ನು ಕಾಪಾಡುವುದು ರಾಜ್ಯದ ಜವಾಬ್ದಾರಿಯಲ್ಲವೇ?

ಖಾಸಗಿ ಆಸ್ತಿಗಳು, ಆರ್ಥಿಕತೆ, ಬೆಳವಣಿಗೆ ಮತ್ತು ಸಮೃದ್ಧಿಗೆ ಮೌಲ್ಯವನ್ನು ಸೇರಿಸುತ್ತವೆ. ಇದು ಸಮುದಾಯದ ಯೋಗಕ್ಷೇಮವನ್ನೂ ನಿರ್ಧರಿಸುತ್ತದೆ.

ನಷ್ಟವನ್ನು ಅಂದಾಜು ಮಾಡುವಲ್ಲಿ ಸಮಗ್ರ ವಿಧಾನವನ್ನು ಅಳವಡಿಸಿಕೊಳ್ಳಲು ಮತ್ತು ಪ್ರವಾಹ ಸಂತ್ರಸ್ತರಿಗೆ ತಕ್ಷಣದ ಪರಿಹಾರವನ್ನು ನೀಡುವಂತೆ ನಾನು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಒತ್ತಾಯಿಸಿದ್ದಾರೆ.

ಸಮಾನತೆಯನ್ನು ಉತ್ತೇಜಿಸುವ ದೇಶದಲ್ಲಿ, ವಿಕೃತ ದೃಷ್ಟಿ ಹೊಂದಿರುವ ಕೆಲವೇ ಜನರು ಲಕ್ಷಾಂತರ ಜನರ ಆಕಾಂಕ್ಷೆಗಳನ್ನು ಕೊಲ್ಲುತ್ತಿದ್ದಾರೆ. ಈ ಕ್ರಮಗಳು ಸಮಾಜದಲ್ಲಿ ದ್ವೇಷಕ್ಕೆ ಕಾರಣವಾಗುತ್ತವೆ ಮತ್ತು ಗೊಂದಲವನ್ನು ಉಂಟುಮಾಡುತ್ತವೆ. ಬುದ್ಧಿವಂತಿಕೆಯಿಂದ ವರ್ತಿಸಬೇಕು ಮತ್ತು ಸಮಾನತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com