ಯಾದಗಿರಿ: ಕಣ್ವ ಮಠದ ಶ್ರೀ ವಿದ್ಯಾವಾರಿಧಿ ತೀರ್ಥ ಸ್ವಾಮೀಜಿ ಕಾಮಪುರಾಣ!

ಕಣ್ವ ಮಠದ ಶ್ರೀ ವಿದ್ಯಾವಾರಿಧಿ ತೀರ್ಥ ಸ್ವಾಮೀಜಿ ಮೈಸೂರು ಮೂಲದ ಮಹಿಳೆಯ ವಾಟ್ಸ್ ಆ್ಯಪ್ ನಂಬರ್ ಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ವಿದ್ಯಾ ವಾರಿಧಿ ತೀರ್ಥ ಸ್ವಾಮೀಜಿ
ವಿದ್ಯಾ ವಾರಿಧಿ ತೀರ್ಥ ಸ್ವಾಮೀಜಿ

ಯಾದಗಿರಿ:  ಕಣ್ವ ಮಠದ ಶ್ರೀ ವಿದ್ಯಾವಾರಿಧಿ ತೀರ್ಥ ಸ್ವಾಮೀಜಿ ಮೈಸೂರು ಮೂಲದ ಮಹಿಳೆಯ ವಾಟ್ಸ್ ಆ್ಯಪ್ ನಂಬರ್ ಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಕೊಪ್ಪಳ ಮೂಲದ ವಿದ್ಯಾವಾರಿದಿ ಸ್ವಾಮೀಜಿ ಮೈಸೂರು ಮೂಲದ ಮಹಿಳೆಯೊಂದಿಗೆ ವಾಟ್ಸ್​ಆಪ್ ನಲ್ಲಿ ಮಾಡಿರುವ ಚಾಟಿಂಗ್​ಫೋಟೋ, ವೀಡಿಯೋ, ಆಡಿಯೋ ಎಲ್ಲೆಡೆ ವೈರಲ್​ಆಗಿದ್ದು, ಮಠ ಮಾನ್ಯಗಳ ಮೇಲೆ ಇಟ್ಟಿರುವ ನಂಬಿಕೆ ನಶಿಸುತ್ತಿರುವುದಕ್ಕೆ ಇಂತಹ ವ್ಯಕ್ತಿಗಳೇ ಕಾರಣ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇನ್ನೂ ವಿಡಿಯೋದಲ್ಲಿರುವುದು ತಾನೇ, ಜೊತೆಗೆ ಚಾಟ್ ಮಾಡಿದ್ದು ತಾವೇ ಆಗಿದ್ದರೆಂದು ಒಪ್ಪಿಕೊಂಡಿದ್ದಾರೆ, ನೈತಿಕ ಹೊಣೆ ಹೊತ್ತು ತಮ್ಮಪೀಠ ತ್ಯಜಿಸುವುದಾಗಿ  ತಿಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನನಗೆ ಗೊತ್ತಿರದ ಮಹಿಳೆಯರು ಈ ರೀತಿ ಮೆಸೆಜ್ ಮಾಡಿದ್ದಾರೆ. ಆದರೆ ನಾನು ಅವರ ಬಳಿ ಅಸಭ್ಯವಾಗಿ ವರ್ತಿಸಿಲ್ಲ. ಅವರೇ ನನಗೆ ಮೊದಲು ಫೋಟೋ, ವಿಡಿಯೋ ಕಾಲ್ ಮಾಡಿದ್ದು ಎಂದು ಹೇಳಿದರು. ಪೀಠದಲ್ಲಿ ಇದ್ದುಕೊಂಡು ಈ ಆರೋಪವನ್ನು ನಾನು ಎದುರಿಸುವುದು ಸರಿಯಲ್ಲ. ಆದ್ದರಿಂದ ಪೀಠತ್ಯಾಗ ಮಾಡಿ ಆರೋಪವನ್ನು ಎದುರಿಸಿ, ಹೋರಾಡುತ್ತೇನೆ. ನಾನು ಯಾವ ತಪ್ಪು ಮಾಡಿಲ್ಲ ಎಂದು ಆರೋಪವನ್ನು ತಳ್ಳಿಹಾಕಿದ್ದಾರೆ.

ಅಲ್ಲದೆ ನನ್ನ ಮೊಬೈಲ್‍ಗೆ ಲಾಕ್ ಇಟ್ಟಿಲ್ಲ. ಆದ್ದರಿಂದ ನನ್ನ ಫೋನ್ ತೆಗೆದುಕೊಂಡು ಯಾರೋ ನನ್ನ ವಿರುದ್ಧ ಈ ರೀತಿ ಷಡ್ಯಂತ್ರ ನಡೆಸಿದ್ದಾರೆ. ನನ್ನ ಧ್ವನಿಯಲ್ಲಿ ಕಾಲ್ ಮಾಡಿದ್ದಾರೆ, ನನ್ನ ಹೆಸರಿನಲ್ಲಿ ಮಹಿಳೆಯರೊಂದಿಗೆ ಚಾಟ್ ಮಾಡಿದ್ದಾರೆ. ನಾನು ಚಾಚುರ್ಮಾಸದ ಕಾರ್ಯಕ್ರಮಗಳಲ್ಲಿ ಇದ್ದಾಗ ಹೆಚ್ಚಾಗಿ ಮೊಬೈಲ್ ಬಳಸುತ್ತಿರಲಿಲ್ಲ. ಬೇಕಾದ ವ್ಯಕ್ತಿಗಳಿಗೆ ಕರೆ ಮಾಡಲು ಬಳಸುತ್ತಿದ್ದೆ. ಆದರೆ ನಾನು ಯಾರಿಗೂ ಚಾಟ್, ವಿಡಿಯೋ ಕಾಲ್ ಮಾಡಿಲ್ಲ ಎಂದರು.

ಆಡಿಯೋ ಹೊರಬಂದಿರುವ ಬಗ್ಗೆ ಮಾತನಾಡಿ, ನನ್ನ ಧ್ವನಿಯಲ್ಲಿ ಯಾರೋ ಮಾತನಾಡಿ ಆಡಿಯೋ ಬಿಡುಗಡೆ ಮಾಡಿದ್ದಾರೆ. ಇದು ನಾನು ಮಾತನಾಡಿರುವುದು ಅಲ್ಲ ಎಂದು ಆರೋಪ ತಳ್ಳಿಹಾಕಿದ್ದಾರೆ. ನಿಮಗೆ ಕೇವಲ ಒಂದೆರಡು ನಂಬರ್‍ಗಳ ಚಾಟ್ ಮಾತ್ರ ಸಿಕ್ಕಿದೆ. ಆದ್ರೆ ಮೊದಲು ಮೂರ್ನಾಲ್ಕು ನಂಬರ್‍ಗಳಿಂದ ಏನು ಚಾಟ್ ಮಾಡಿದ್ದರು, ಏನೆಲ್ಲಾ ಫೋಟೋ ವಿಡಿಯೋ ಕಳುಹಿಸಿದ್ದರು ಎಂದು ನಿಮಗೆ ಗೊತ್ತಿಲ್ಲ. ಸಂಚು ರೂಪಿಸಿದ್ದಾರೆ ಅದ್ಯಾವುದನ್ನು ನಿಮಗೆ ತಲುಪಿಸಿಲ್ಲ. ಇದೆಲ್ಲಾ ಒಂದು ಸಂಚು, ನನ್ನ ಹೆಸರು ಹಾಳು ಮಾಡಲು ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದರು.

ಕಳೆದ 4-5 ವರ್ಷಗಳಿಂದಲೂ ಈ ರೀತಿ ಸಂಚುಗಳು ನನ್ನ ವಿರುದ್ಧ ನಡೆಯುತ್ತಲೇ ಬಂದಿದೆ. ನಾನು ಈ ಪೀಠವನ್ನು ಆರೋಹಣ ಮಾಡುತ್ತಿದ್ದಾಗ ಗಲಾಟೆ ಮಾಡಿದ ವ್ಯಕ್ತಿಗಳೇ ಇದರ ರುವಾರಿಗಳಾಗಿದ್ದಾರೆ. ಅವರೇ ನನ್ನ ವಿರುದ್ಧ ಸಂಚು ಹೂಡಿದ್ದಾರೆ. ಮಠದ ಟ್ರಸ್ಟ್ ಮುಖಾಂತರ, ಭಕ್ತರ ಸಹಾಯ ಪಡೆದು ಇದರ ತನಿಖೆ ನಡೆಸುತ್ತೇವೆ ಎಂದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com