ಖಾಸಗಿ ಟಿವಿ ನಿಯಂತ್ರಿಸಲು ಸಮಿತಿ; 2 ತಿಂಗಳ ಗಡುವು ನೀಡಿದ ಹೈಕೋರ್ಟ್

ಖಾಸಗಿ ಟಿ.ವಿ ವಾಹಿನಿ ಕಾರ್ಯಕ್ರಮಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚರಣಾ ಸಮಿತಿಗಳನ್ನು ರಚಿಸುವಂತೆ ಕೇಂದ್ರ ಸರ್ಕಾರ ನೀಡಿದ್ದ ಆದೇಶ ಪಾಲನೆಗೆ ಸರ್ಕಾರಕ್ಕೆ ಹೈಕೋರ್ಟ್ 2 ತಿಂಗಳ ಗಡುವು ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಖಾಸಗಿ ಟಿ.ವಿ ವಾಹಿನಿ ಕಾರ್ಯಕ್ರಮಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಮೇಲ್ವಿಚರಣಾ ಸಮಿತಿಗಳನ್ನು ರಚಿಸುವಂತೆ ಕೇಂದ್ರ ಸರ್ಕಾರ ನೀಡಿದ್ದ ಆದೇಶ ಪಾಲನೆಗೆ ಸರ್ಕಾರಕ್ಕೆ ಹೈಕೋರ್ಟ್ 2 ತಿಂಗಳ ಗಡುವು ನೀಡಿದೆ.

ರಾಜ್ಯದಲ್ಲಿ ಮೇಲ್ವಿಚರಣಾ ಸಮಿತಿ ರಚಿಸಿಲ್ಲ ಎಂದು ಆರೋಪಿಸಿ ನಗರದ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ಪೀಠ ಮಂಗಳವಾರ ಈ ಆದೇಶ ನೀಡಿತು.

ಖಾಸಗಿ ವಾಹಿನಿಗಳಲ್ಲಿ ಆಕ್ಷೇಪಾರ್ಹ ಸುದ್ದಿ ಪ್ರಸಾರವಾದ ಬಗ್ಗೆ ಜಿಲ್ಲಾ ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನೇತೃತ್ವದಲ್ಲಿ ದೂರು ಕೋಶಗಳನ್ನೂ ರಚಿಸುವಂತೆ ಸರ್ಕಾರಕ್ಕೆ ಆದೇಶಿಸಿದ ಪೀಠ, ಈ ಆದೇಶ ಪಾಲನೆ ಕುರಿತು ನ.22ರ ಒಳಗೆ ಅನುಪಾಲನಾ ವರದಿ ಸಲ್ಲಿಸುವಂತೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com