ಶೀಘ್ರದಲ್ಲೇ ಪೊಲೀಸ್ ವೇತನ ಹೆಚ್ಚಳ

ರಾಘವೇಂದ್ರ ಔರಾದ್ಕರ್ ಸಮಿತಿ ಶಿಫಾರಸ್ಸಿನಂತೆ ಅಗ್ನಿಶಾಮಕ ತುರ್ತುಸೇವೆ, ಕಾರಾಗೃಹ ಸಿಬ್ಬಂದಿಗಳ ವೇತನ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಬುಧವಾರ ಒಪ್ಪಿಗೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಘವೇಂದ್ರ ಔರಾದ್ಕರ್ ಸಮಿತಿ ಶಿಫಾರಸ್ಸಿನಂತೆ ಅಗ್ನಿಶಾಮಕ ತುರ್ತುಸೇವೆ, ಕಾರಾಗೃಹ ಸಿಬ್ಬಂದಿಗಳ ವೇತನ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಬುಧವಾರ ಒಪ್ಪಿಗೆ ನೀಡಿದೆ. 

ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಾಗಿದ್ದು, ರಾಘವೇಂದ್ರ ಔರಾದ್ಕರ್ ಸಮಿತಿ ವರದಿಯಂತೆ ಪೊಲೀಸ್ ಸಿಬ್ಬಂದಿಗಳ ವೇತನ ಹೆಚ್ಚಳ ಮಾಡುವುದಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರು ಹೇಳಿದ್ದಾರೆ. 

ಮುಖ್ಯ ಪೊಲೀಸ್ ಕಚೇರಿ ಬಳಿ ಆಯೋಜನೆ ಮಾಡಿದ್ದ ಇಂಜಿನಿಯರ್ಸ್ ಡೇ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಬೊಮ್ಮಾಯಿಯವರು, ತಾಂತ್ರಿಕ ಕಾರಣಗಳಿಂದಾಗಿ ಪೊಲೀಸ್ ಸಿಬ್ಬಂದಿಗಳಿಗೆ ನೂತನ ವೇತನ ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ. ಆದರೆ, ಯಾವುದೇ ಕಾರಣಕ್ಕೂ ಸರ್ಕಾರ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯುವುದಿಲ್ಲ. ಶೀಘ್ರದಲ್ಲಿಯೇ ನೂತನ ವೇತನ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. 

ಇಷ್ಟೂ ದಿನ ಕಾರಾಗೃಹ ಸಿಬ್ಬಂದು ತುರ್ತುಸೇವಾ ಸಿಬ್ಬಂದಿ, ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ವೇತನ ಪರಿಷ್ಕರಣೆಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿರಲಿಲ್ಲ. ಆದರೆ, ಇದೀಗ ಅವರನ್ನೂ ಸೇರ್ಪಡೆಗೊಳಿಸಲು ನಿರ್ಧರಿಸಿದ್ದೇವೆಂದಿದ್ದಾರೆ. 

ಈ ನಡುವೆ ಡಿಜಿ ಮತ್ತು ಐಜಿಪಿ ನೀಲಮಣಿ ಎನ್ ರಾಜು ಅವರು ಸುತ್ತೋಲೆಯನ್ನು ಹೊರಡಿಸಿದ್ದು, 2-3 ದಿನಗಳೊಳಗಾಗಿ ಪೊಲೀಸ್ ಅಧಿಕಾರಿಗಳ ವೇತನ ಪರಿಷ್ಕರಣೆ ಲೆಕ್ಕಾಚಾರ ಇತ್ಯರ್ಥಗೊಳ್ಳಲಿದೆ. ಪೊಲೀಸರಿಗೆ ಆಯಾ ಘಟಕಗಳ ಮುಖ್ಯಸ್ಥರು ಸಂವಹನ ನಡೆಸಲಿದ್ದಾರೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com