ಶೀಘ್ರದಲ್ಲೇ ನೂತನ ಐಟಿ ನೀತಿ ಜಾರಿಗೆ- ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನದಲ್ಲಿ ಹೆಚ್ಚಿನ ಉದ್ಯೋಗವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ನೂತನ ಮಾಹಿತಿ ತಂತ್ರಜ್ಞಾನ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Published: 19th September 2019 05:16 PM  |   Last Updated: 19th September 2019 05:16 PM   |  A+A-


CMBSYediyurappa

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

Posted By : Nagaraja AB
Source : UNI

ಬೆಂಗಳೂರು:ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನದಲ್ಲಿ ಹೆಚ್ಚಿನ ಉದ್ಯೋಗವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ನೂತನ ಮಾಹಿತಿ ತಂತ್ರಜ್ಞಾನ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಐಟಿ-ಬಿಟಿ ಸಂಸ್ಥಾಪಕರ ಜೊತೆಗೆ ಸ್ನೇಹಕೂಟ ಸಭೆಯಲ್ಲಿ ಮಾತನಾಡಿದ ಅವರು, ನೂತನ ನೀತಿಯಲ್ಲಿ ಹೆಚ್ಚಿನ ಹೂಡಿಕೆ ಆಕರ್ಷಣೆ ಹಾಗೂ ಉದ್ಯೋಗವಕಾಶಗಳ ಸೃಷ್ಟಿಗೆ ಆದ್ಯತೆ ನೀಡಲಾಗುತ್ತಿದ್ದು,ಆಧುನಿಕ ತಂತ್ರಜ್ಞಾನಗಳ ಕಂಪನಿಗಳನ್ನು ಉತ್ತೇಜಿಸಲಾಗುವುದು ಎಂದು ತಿಳಿಸಿದರು.

ಸ್ಟಾರ್ಟ್ ಆಪ್ ಕಂಪನಿಗಳ ಪ್ರಗತಿಗಾಗಿ ನೂತನ ಅನ್ವೇಷಣಾ ಪ್ರಾಧಿಕಾರ ಹಾಗೂ ವಿಷನ್ ಗ್ರೂಪ್ ರಚನೆ ಸಹ ನೂತನ ನೀತಿಯಲ್ಲಿದೆ.ಮೈಸೂರು, ಮಂಗಳೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ, ವಿಜಯಪುರ ಮತ್ತಿತರ ಎರಡನೇ ಹಂತದ ನಗರಗಳಲ್ಲಿ ಐಟಿ ಉದ್ಯಮಗಳನ್ನು ವಿಸ್ತರಿಸಲಾಗುವುದು,ಇಂತಹ ಕಡೆಗಳಲ್ಲಿ ಕಂಪನಿ ಸ್ಥಾಪಿಸಲು ಮುಂದೆ ಬರುವವರಿಗೆ ಅಗತ್ಯ ಸವಲತ್ತುಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಹಾಗೂ ಐಟಿ-ಬಿಟಿ ಸಚಿವ ಡಾ. ಅಶ್ವತ್ಥ ನಾರಾಯಣ, ದೇಶದ ಐಟಿ ಕ್ಷೇತ್ರ ಒಂದು ಟ್ರಿಲಿಯನ್ ಮಾರ್ಕೆಟ್ ಗುರಿ ಮುಟ್ಟಿದಾಗ ಅದರಲ್ಲಿ ಶೇ, 40 ರಷ್ಟು ಪಾಲು ಕರ್ನಾಟಕದ್ದೇ ಇರಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು  ತಿಳಿಸಿದರು.

Stay up to date on all the latest ರಾಜ್ಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp